ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಮೊರೇನಾ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳು ಸಂಧಾನಕ್ಕೆಂದು ತೆರಳಿದ್ದ ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ, ಆಕೆಗೆ ಬೆಂಕಿ ಹಚ್ಚಿ, ಕೊಲ್ಲಲು ಯತ್ನಿಸಿದ ಭೀಕರ ಘಟನೆ ನಡೆದಿದೆ.
38 ವರ್ಷದ ಸಂತ್ರಸ್ತೆ ತನ್ನ ಪತಿ ಮಾಡಿದ ಅತ್ಯಾಚಾರದ ಬಗ್ಗೆ ಚರ್ಚಿಸಿ ಸಂಧಾನ ನಡೆಸಲು ಆರೋಪಿಯ ಮನೆಗೆ ಬಂದಿದ್ದಳು. ಈ ವೇಳೆ ಮೂವರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಅಷ್ಟೇ ಅಲ್ಲದೆ ಗರ್ಭಿಣಿ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಮಹಿಳೆಗೆ ಶೇ.80ರಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.