Friday, July 1, 2022

Latest Posts

ಮೈಸೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಗಲ್ಲು ಶಿಕ್ಷೆ ನೀಡಲು ಕೊರವೇ ಮಹಿಳಾ ಘಟಕ ಒತ್ತಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಕೊಡಗು ರಕ್ಷಣಾ ವೇದಿಕೆಯ ಮಹಿಳಾ ಘಟಕ ತೀವ್ರವಾಗಿ ಖಂಡಿಸಿದೆ.
ಪತ್ರಿಕಾ ಹೇಳಿಕೆ ನೀಡಿರುವ ಘಟಕದ ಪ್ರಧಾನ ಕಾರ್ಯದರ್ಶಿ ಅನಿತಾ ತೆರೇಸಾ, ಕಾರ್ಯದರ್ಶಿ ಪವಿತ್ರ, ಸಂಘಟನಾ ಕಾರ್ಯದರ್ಶಿ ನಾಗರತ್ನ, ಖಜಾಂಚಿ ಡಿ.ರಾಣಿ , ನಿರ್ದೇಶಕರುಗಳಾದ ಖುಷಿ ನಾಣಯ್ಯ, ಕೃಪಾ ಚಂಗಪ್ಪ ಹಾಗೂ ಪಿ.ಟಿ.ದೇವಕಿ, ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮೈಸೂರಿನಲ್ಲಿ ಅಮಾನವೀಯ ರೀತಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಇದನ್ನು ಇಡೀ ಮಹಿಳಾ ಸಮುದಾಯ ಕಟು ಶಬ್ಧಗಳಲ್ಲಿ ಖಂಡಿಸುತ್ತದೆ. ಈ ಪ್ರಕರಣ ಹಸಿರಾಗಿರುವಾಗಲೇ ತುಮಕೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದ್ದು, ಇಡೀ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಲ್ಲು ಶಿಕ್ಷೆ ಸಿಗುವಂತೆ ಮಾಡಬೇಕು. ಆ ಮೂಲಕ ಇನ್ನು ಮುಂದೆ ಈ ರೀತಿಯ ಹೇಯ ಕೃತ್ಯಗಳು ನಡೆಯದಂತೆ ಕಿಡಿಗೇಡಿಗಳಲ್ಲಿ ಭಯ ಹುಟ್ಟಿಸಬೇಕು. ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತಂದು ಸಮಾಜದಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ಧೈರ್ಯವಾಗಿ ಸಂಚರಿಸುವ ವಾತಾವರಣವನ್ನು ಸೃಷ್ಟಿಸಬೇಕು ಎಂದು ಪ್ರಮುಖರು ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss