ಹೊಸದಿಗಂತ ವರದಿ ಯಲ್ಲಾಪುರ:
ಮಾಗೋಡು ಕ್ರಾಸ್ ಸಮೀಪ ಮಂಗಳವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪರೂಪದ ಕಪ್ಪು ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.
ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿ ಹೊಡೆದ ವಾಹನ ಯಾವುದು, ಚಾಲಕ ಯಾರು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
ರಾತ್ರಿ ವೇಳೆ ಕಾಡಿನಿಂದ ಹೊರಬಂದು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.



