ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ ಪದ್ಮನಾಭ ಪೂಜಾರಿ ಅವರ ಪತ್ನಿ ದೀಕ್ಷಿತಾ ಅವರು ಬುಧವಾರ ಮಧ್ಯಾಹ್ನ ಮೂವರು ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮೂರು ಮಕ್ಕಳು ಆರೋಗ್ಯವಾಗಿದ್ದಾರೆ. ಮೊದಲು ಗಂಡು ಮಗುವಿಗೆ ಬಳಿಕ ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ಡಾ.ವಿನೀತ ಶೆಟ್ಟಿ ಅವರ ತಂಡ ಸಿಸೇರಿಯನ್ ಮೂಲಕ ಮಕ್ಕಳನ್ನು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ