January20, 2026
Tuesday, January 20, 2026
spot_img

ರಾಸಲೀಲೆ ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ತಲೆದಂಡ, ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೊ ವೈರಲ್ ಆದ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ನಿನ್ನೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನು ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಿದೆ.

ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್​​ ಮಹಿಳೆಯನ್ನು ಅಪ್ಪಿಕೊಂಡು ಮುದ್ದಾಡುತ್ತಿರುವ ಹಸಿಬಿಸಿ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನು ಅಪ್ಪಿಕೊಂಡು IPS ಅಧಿಕಾರಿ ರಾಮಚಂದ್ರ ರಾವ್ ಸರಸ ನಡೆಸಿರುವುದು ವಿಡಿಯೊದಲ್ಲಿ ಕಂಡುಬರುತ್ತದೆ. ಇದು ಅವರ ಪುತ್ರಿ ರನ್ಯಾರಾವ್​ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುವ ಮೊದಲು ನಡೆದಿರುವ ಘಟನೆ ಎಂದು ಹೇಳಲಾಗುತ್ತಿದೆ.

ಅತ್ತ ಮಗಳು ರನ್ಯಾರಾವ್​ ಚಿನ್ನ ಕಳ್ಳಸಾಗಾಣಿಕೆ ಕೇಸ್​​ನಲ್ಲಿ ಸಿಕ್ಕಿ ಜೈಲುವಾಸ ಅನುಭವಿಸುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್​​ ಆಗಿರುವುದು ರಾಜ್ಯಾದ್ಯಂತ ಸದ್ದುಮಾಡಿದೆ.

Must Read