ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ನಟಿ ರಶ್ಮಿಕಾ ಮಂದಣ್ಣ ಅವರ ಕಾಲಿಗೆ ಗಾಯವಾಗಿದ್ದು, ಶ್ರೀವಲ್ಲಿ ಸದ್ಯ ಬೆಡ್ ರೆಸ್ಟ್‌ನಲ್ಲಿದ್ದಾರೆ.
ಈ ನಿಟ್ಟಿನಲ್ಲಿ ಇನ್ ಸ್ಟಾಗ್ರಾಂನಲ್ಲಿ ಕಾಲಿಗೆ ಗಾಯವಾಗಿರುವ ಫೋಟೋ ಹಾಕಿದ್ದು, ಚಿತ್ರದ ನಿರ್ದೇಶಕರ ಬಳಿ ಕ್ಷಮೆ ಕೇಳಿದ್ದಾರೆ.
ನಾನು ಜಿಮ್‌ನಲ್ಲಿ ಗಾಯಗೊಂಡಿದ್ದೇನೆ. ಮುಂದಿನ ಕೆಲವು ವಾರಗಳು ಅಥವಾ ತಿಂಗಳುಗಳ ಕಾಲ ನಾನು ವಿಶ್ರಾಂತಿ ಪಡೆಯುತ್ತೇನೆ. ಚೇತರಿಸಿಕೊಳ್ಳಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದು ದೇವರಿಗೆ ಮಾತ್ರ ಗೊತ್ತು. ನನ್ನ ಕಾಲಿನ ನೋವು ವಾಸಿಯಾದ ನಂತರ ನಾನು ಥಾಮ, ಸಿಕಂದರ್ ಮತ್ತು ಕುಬೇರ ಚಿತ್ರೀಕರಣಕ್ಕೆ ಮರಳುತ್ತೇನೆ. ವಿಳಂಬಕ್ಕಾಗಿ ಕ್ಷಮಿಸಿ” ಎಂದು ಅವರು ಸಂದೇಶದಲ್ಲಿ ಬರೆದಿದ್ದಾರೆ.