ರಶ್ಮಿಕಾ ಕೈಯಲ್ಲಿ ಸಾಲು ಸಾಲು ಸಿನಿಮಾ, ರಾಮ್ ಚರಣ್ ಹೊಸ ಸಿನಿಮಾಗೂ ರಶ್ಮಿಕಾ ನಾಯಕಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಶ್ಮಿಕಾ ಇದೀಗ ಬಹುಬೇಡಿಕೆಯ ನಟಿ, ತೆಲುಗು, ತಮಿಳು, ಹಿಂದಿ ಸಿನಿಮಾಗಳ ಶೂಟಿಂಗ್‌ನಲ್ಲಿ ರಶ್ಮಿಕಾ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಕೆಲ ಸಿನಿಮಾಗಳ ಶೂಟಿಂಗ್ ನಡೆಯುತ್ತಿದ್ದರೆ, ಇತ್ತ ಕೆಲ ಸಿನಿಮಾಗಳಿಗೆ ರಶ್ಮಿಕಾ ಈಗಷ್ಟೇ ಸಹಿ ಹಾಕಿದ್ದಾರೆ. ಈ ಸಾಲಿಗೆ ಹೊಸ ಸಿನಿಮಾವೊಂದು ಸೇರ್ಪಡೆಯಾಗಿದೆ.

ಟಾಲಿವುಡ್ ಸ್ಟಾರ್ ರಾಮ್ ಚರಣ್ ತೇಜ ಅವರ ‘ಆರ್‌ಸಿ16’ ಸಿನಿಮಾಕ್ಕೆ ರಶ್ಮಿಕಾ ನಾಯಕ ಎನ್ನುವ ವಿಚಾರ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಗೌತಮ್ ತಿನ್ನನೂರಿ ನಿರ್ದೇಶನದ ಈ ಸಿನಿಮಾಗೆ ದಿಶಾ ಪಟಾನಿ ನಾಯಕಿ ಎಂದು ಹೇಳಲಾಗಿತ್ತು. ಆದರೆ ಇದೀಗ ಈ ಸಿನಿಮಾ ರಶ್ಮಿಕಾ ಪಾಲಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!