Friday, June 9, 2023

Latest Posts

VIRAL VIDEO| ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ತಮನ್ನಾ, ರಶ್ಮಿಕಾ ಮಂದಣ್ಣ ನೃತ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16 ನೇ ಸೀಸನ್ ಇಂದಿನಿಂದ ಪ್ರಾರಂಭವಾಗಲಿದೆ. ಇಂದು ಮಾರ್ಚ್ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಹಾಗಾಗಿ ಐಪಿಎಲ್ ಉದ್ಘಾಟನೆಗೆ ವಿಶೇಷ ಪ್ರದರ್ಶನಗಳನ್ನೂ ಏರ್ಪಡಿಸಲಾಗಿದೆ.

ಈ ಬಾರಿ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ಮಿಲ್ಕಿ ಬ್ಯೂಟಿ ತಮನ್ನಾ ವಿಶೇಷ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಅಧಿಕೃತ ಘೋಷಣೆ ಮಾಡಿದ ನಂತರ ಐಪಿಎಲ್ ಆಯೋಜಕರು ಈಗಾಗಲೇ ಇಬ್ಬರು ಅಭ್ಯಾಸ ಮಾಡುತ್ತಿರುವ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಅವರ ವಿಶೇಷ ನೃತ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇವರೊಂದಿಗೆ ಬಾಲಿವುಡ್ ಸ್ಟಾರ್ ಸಿಂಗರ್ ಅರ್ಜಿತ್ ಸಿಂಗ್ ತಮ್ಮ ಹಾಡುಗಳೊಂದಿಗೆ ಎಲ್ಲರನ್ನು ರಂಜಿಸಲಿದ್ದಾರೆ.

ಇಂದಿನ ಮೊದಲ ಪಂದ್ಯವು ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಈ ವಿಶೇಷ ಪ್ರದರ್ಶನಗಳು ಮತ್ತು ಆರಂಭಿಕ ಕಾರ್ಯಕ್ರಮಗಳು ಸಂಜೆ 6:00ರಿಂದ ಪ್ರಾರಂಭವಾಗುತ್ತವೆ. ಈ ಬಾರಿಯ ಐಪಿಎಲ್ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಜೊತೆಗೆ ಜಿಯೋ ಸಿನಿಮಾಸ್ ಆಪ್ ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!