ರಶ್ಮಿಕಾ ಮಂದಣ್ಣ ಡೀಪ್​ಫೇಕ್​ ವಿಡಿಯೋ ಪ್ರಕರಣ: ಆಂಧ್ರದಲ್ಲಿ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್​ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ.

ರೋಪಿಯನ್ನು ಹೈದರಾಬಾದಿನಲ್ಲಿ ಬಂಧಿಸಿರುವ ಪೊಲೀಸರು ದೆಹಲಿಗೆ ಕರೆತರುತ್ತಿರುವುದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಬಗ್ಗೆ ನಟಿ ಸೇರಿದಂತೆ ಅನೇಕರು ಅಸಮಾಧಾನವನ್ನು ಹೊರಹಾಕಿದ್ದರು.

ಡೀಪ್‌ಫೇಕ್ ವಿಡಿಯೊಗಳ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆತಂಕ ವ್ಯಕ್ತಪಡಿಸಿದ್ದರು. ಇಂತಹ ಕೃತ್ಯಗಳನ್ನು ತಡೆಯಲು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಈ ಘಟನೆ ಬಳಿಕ ನಟಿ ಕತ್ರಿನಾ ಕೈಫ್‌, ಸಾರಾ ತೆಂಡಲ್ಕೂರ್‌ ಸೇರಿದಂತೆ ಹಲವು ಸೆಲೆಬ್ರಿಟಿಗಳ ಡೀಪ್‌ಫೇಕ್ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!