ಹೊಸದಿಗಂತ ಡಿಜಿಟಲ್ ಡೆಸ್ಕ್:
ರಶ್ಮಿಕಾ ಮಂದಣ್ಣ ಪ್ರಸ್ತುತ ತೆಲುಗು ಮತ್ತು ಬಾಲಿವುಡ್‌ನಲ್ಲಿ ಸರಣಿ ಚಿತ್ರಗಳೊಂದಿಗೆ ಸ್ಟಾರ್ ನಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಸಖತ್ ಫೇಮಸ್ ಆಗಿರುವ ನಟಿಯ ವಿಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಡೀಪ್ ನೆಕ್ ಕಪ್ಪು ಬಣ್ಣದ ಡ್ರೆಸ್ ನಲ್ಲಿ ರಶ್ಮಿಕಾ ಲಿಫ್ಟ್ ಪ್ರವೇಶಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಖತ್ ಟ್ರೋಲ್ ಕೂಡ ಆಗಿದ್ದರು.
ಆದರೆ ಈ ವಿಡಿಯೋ ಇದೀಗ ನಕಲಿ ವಿಡಿಯೋ ಎಂದು ತಿಳಿದು ಬಂದಿದೆ. ಮೂಲ ವೀಡಿಯೊ ಸಾಮಾಜಿಕ ಮಾಧ್ಯಮದ ಪ್ರಭಾವಿ ಜಾರಾ ಪಟೇಲ್‌ಗೆ ಸಂಬಂಧಿಸಿದ್ದು. ಯಾರೋ ರಶ್ಮಿಕಾ ಮುಖದ ಜೊತೆ ಆಕೆಯ ವಿಡಿಯೋವನ್ನು ಮಾರ್ಫ್ ಮಾಡಿ ಬಿಡುಗಡೆ ಮಾಡಿದ್ದಾರೆ.
ಒರಿಜಿನಲ್ ವಿಡಿಯೋ, ರಶ್ಮಿಕಾ ಅವರ ಮಾರ್ಫಿಂಗ್ ವಿಡಿಯೋವನ್ನು ಹಲವರು ಶೇರ್ ಮಾಡಿ ಸತ್ಯ ಬಿಚ್ಚಿಟ್ಟಿದ್ದಾರೆ. ಸೈಬರ್ ಅಪರಾಧದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರಶ್ಮಿಕಾ ಅಭಿಮಾನಿಗಳು ಒತ್ತಾಯಿಸಿದರು. ಇದಕ್ಕೆ ದನಿಗೂಡಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಕೂಡ ಗಂಭೀರ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ. ಆದರೆ ಈ ಬಗ್ಗೆ ರಶ್ಮಿಕಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
yes this is a strong case for legal https://t.co/wHJl7PSYPN
— Amitabh Bachchan (@SrBachchan) November 5, 2023