ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಇದೀಗ ಅಫಿಶಿಯಲ್ ಆಗಿ ಬಾಲಿವುಡ್‌ಗೆ ಸೇರಿಹೋಗಿದ್ದಾರೆ. ನಟ ವಿಕ್ಕಿ ಕೌಶಲ್ ಜೊತೆ ರಶ್ಮಿಕಾ ಛಾವ ಸಿನಿಮಾದಲ್ಲಿ ನಟಿಸುತ್ತಿದ್ದು, ಐತಿಹಾಸಿಕ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ.
ಯಶುಬಾಯ್ ಮಹಾರಾಣಿಯಾಗಿ ರಶ್ಮಿಕಾ ಮಿಂಚಿದ್ದು, ಮೊದಲ ಪೋಸ್ಟರ್ ಬಿಡುಗಡೆ ಆಗಿದೆ. ರಶ್ಮಿಕಾ ಮಂದಣ್ಣ ಅವರ ಮಹಾರಾಣಿ ಗೆಟಪ್‌ಗೆ ಅಭಿಮಾನಿಗಳು ಫಿದಾ ಆಗಿದ್ದು, ಫೋಟೋ ಫುಲ್ ವೈರಲ್ ಆಗಿದೆ.
ಪುಷ್ಪ 2 ಬಳಿಕ ರಶ್ಮಿಕಾ ಮಂದಣ್ಣ ಅವರು ಛಾವ ಸಿನಿಮಾದ ಐತಿಹಾಸಿಕ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಉತ್ತರಾಧಿಕಾರಿ ಛತ್ರಪತಿ ಸಾಂಭಾಜಿ ಮಹಾರಾಜ್ ಜೀವನನಾಧಾರಿತ ಚಿತ್ರ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.