ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ ವಿಚಾರ ರಹಸ್ಯವಾಗಿ ಉಳಿದಿಲ್ಲ. ಈಗಾಗಲೇ ಸಾಕಷ್ಟು ಬಾರಿ ರಶ್ಮಿಕಾ ಹಾಗೂ ವಿಜಯ್ ಒಂದೇ ಕಡೆ ಡಿನ್ನರ್‌ಗೆ ಹೋಗಿದ್ದ ಫೋಟೊಗಳು ವೈರಲ್ ಆಗಿವೆ.
ಇತ್ತೀಚೆಗಷ್ಟೇ ವಿಜಯ್ ಕೂಡ ನಾನು ರಿಲೇಷನ್‌ಶಿಪ್‌ನಲ್ಲಿ ಇದ್ದೇನೆ ಎಂದು ಹೇಳಿಕೊಂಡಿದ್ದರು. ಈಗ ಈ ಬಗ್ಗೆ ರಶ್ಮಿಕಾ ರಿಯಾಕ್ಟ್ ಮಾಡಿ ವಿಜಯ್ನ ಮದುವೆ ಆಗುತ್ತಿರುವ ವಿಚಾರನ ಅವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ನೀವು ಸಿನಿಮಾ ಇಂಡಸ್ಟ್ರಿಯನ್ನು ಮದುವೆ ಆಗ್ತೀರಾ ಅಥವಾ ಹೊರಗಿನವರನ್ನು ಮದುವೆ ಆಗ್ತೀರಾ? ನೀವು ಕ್ಲ್ಯಾರಿಟಿ ಕೊಟ್ಟರೆ ನಾವು ಹುಡುಗನ ಹುಡುಕುತ್ತೀರಿ’ ಎಂದು ಇಂಟರ್‌ವ್ಯೂ ಮಾಡುವವರು ಹೇಳಿದರು. ‘ಎಲ್ಲರಿಗೂ ಆ ಬಗ್ಗೆ ಗೊತ್ತು’ ಎಂದು ರಶ್ಮಿಕಾ ಹೇಳಿದ್ದಾರೆ. ಈ ಮಾತನ್ನು ಕೇಳಿ ಎಲ್ಲರೂ ಚಿಯರ್ ಮಾಡಿದರು. ‘ನಿಮಗೆ ಯಾವ ಉತ್ತರ ಬೇಕು ಎಂಬುದು ನಂಗೆ ಗೊತ್ತು. ನನಗೆ ಚೆನ್ನಾಗಿ ಗೊತ್ತು’ ಎಂದು ರಶ್ಮಿಕಾ ಹೇಳಿದರು.