ಮೊದಲ ಬಾರಿಗೆ ರಕ್ಷಿತ್-ರಿಷಬ್ ಕುರಿತು ಮಾತನಾಡಿದ ರಶ್ಮಿಕಾ ಮಂದಣ್ಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕನ್ನಡ ಸಿನಿಮಾ ಮೂಲಕ ಬೆಳ್ಳಿತೆರೆಗೆ ಬಂದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಇಂದು ಇಡೀ ಭಾರತ ಚಿತ್ರರಂಗದಲ್ಲೇ ಬೇಡಿಕೆಯ ನಟಿಯರಲ್ಲಿ ಒಬ್ಬರು.

ಇದೀಗ ಅವರ ನಟನೆಯ‘ವಾರಿಸು’ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ‘ಮಿಷನ್ ಮಜ್ನು’ ಸಿನಿಮಾ (Mission Majnu Movie) ರಿಲೀಸ್​ಗೆ ರೆಡಿ ಇದೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ರಕ್ಷಿತ್, ರಿಷಬ್ ಶೆಟ್ಟಿ ಹಾಗೂ ಪುನೀತ್ ರಾಜ್​ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ಮತ್ತು ಧನ್ಯವಾದ ಹೇಳಿದ್ದಾರೆ.

ಪ್ರೇಮಾ ದಿ ಜರ್ನಲಿಸ್ಟ್ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ಮೊದಲ ಎರಡು ಸಿನಿಮಾಗಳ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ರಶ್ಮಿಕಾ ಯಾವುದೇ ಹಿಂಜರಿಕೆ ಇಲ್ಲದೆ ಉತ್ತರಿಸಿದ್ದಾರೆ.

ರಶ್ಮಿಕಾ ಮಂದಣ್ಣ ನಟಿಸಿದ ಮೊದಲ ಸಿನಿಮಾ ‘ಕಿರಿಕ್ ಪಾರ್ಟಿ’. ಈ ಚಿತ್ರವನ್ನು ರಿಷಬ್ ನಿರ್ದೇಶನ ಮಾಡಿದರೆ, ರಕ್ಷಿತ್ ನಿರ್ಮಾಣ ಮಾಡಿ ನಟಿಸಿದ್ದರು. ಎರಡನೇ ಸಿನಿಮಾ ‘ಅಂಜನಿಪುತ್ರ’ದಲ್ಲಿ ಪುನೀತ್ ರಾಜ್​ಕುಮಾರ್ ಜತೆ ರಶ್ಮಿಕಾ ನಟಿಸಿದ್ದರು. ಈ ಸಿನಿಮಾಗಳ ಬಗ್ಗೆ ಪ್ರೇಮಾ ಪ್ರಶ್ನೆ ಮಾಡಿದರು. ಇದಕ್ಕೆ ರಶ್ಮಿಕಾ ಉತ್ತರ ನೀಡಿದ್ದಾರೆ.

‘ರಕ್ಷಿತ್ ಹಾಗೂ ರಿಷಬ್ ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು. ಅವರು ನನಗೆ ಅವಕಾಶ ನೀಡಿದರು. ಅಂಜನಿಪುತ್ರ ಸಿನಿಮಾದಲ್ಲಿ ಪುನೀತ್ ಜತೆ ನಟಿಸಿದೆ. ಅವರು ವಿಶಾಲವಾಗಿ ಆಲೋಚಿಸುವುದನ್ನು ಹೇಳಿಕೊಟ್ಟರು. ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳ್ಳುತ್ತೇನೆ. ನನ್ನ ಕಡೆಯಿಂದ ಧನ್ಯವಾದ’ ಎಂದಿದ್ದಾರೆ.

ಈ ಮೊದಲ ಸಿನಿಮಾದ ನಿರ್ಮಾಣ ಸಂಸ್ಥೆಯ ಹೆಸರನ್ನು ಹೇಳಲು ಹಿಂದೇಟು ಹಾಕಿದ್ದರು. ಇದಕ್ಕೆ ಸಾಕಷ್ಟು ಟೀಕೆ ಬಂದಿತ್ತು. ರಶ್ಮಿಕಾ ಮಂದಣ್ಣ ಅವರನ್ನು ಬ್ಯಾನ್ ಮಾಡಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!