ʻಅಮ್ಮನಾಗಿ ಸಮಂತಾರನ್ನು ನೋಡಿಕೊಳ್ಳುವ ಆಸೆ: ಆಕೆಯೇ ನನಗೆ ಸ್ಫೂರ್ತಿʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಳೆದ ಕೆಲವು ದಿನಗಳಿಂದ ಸ್ಟಾರ್ ಹೀರೋಯಿನ್ ಸಮಂತಾ ಮಯೋಸಿಟಿಸ್ ನಿಂದ ಬಳಲುತ್ತಿರುವುದು ಗೊತ್ತೇ ಇದೆ. ಸದ್ಯ ಸಮಂತಾ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಭಿಮಾನಿಗಳು, ಪ್ರೇಕ್ಷಕರು ಮತ್ತು ಅನೇಕ ಸೆಲೆಬ್ರಿಟಿಗಳು ಸಮಂತಾ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಇತ್ತೀಚೆಗೆ ನಾಯಕಿ ರಶ್ಮಿಕಾ ಮಂದಣ್ಣ ಕೂಡಾ ಸಮಂತಾ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬಾಲಿವುಡ್‌ನಲ್ಲಿ ಮಿಷನ್ ಮಜ್ನು ಪ್ರಚಾರದ ಭಾಗವಾಗಿ ನೀಡಿದ ಸಂದರ್ಶನದಲ್ಲಿ ಸಮಂತಾ ಬಗ್ಗೆ ಮಾತನಾಡಿದ್ದಾರೆ. ಸಮಂತಾ ಮಯೋಸಿಟಿಸ್‌ನಿಂದ ಬಳಲುತ್ತಿದ್ದಾರೆ ಎಂದು ಅವರು ತಿಳಿಸುವವರೆಗೂ ನನಗೆ ತಿಳಿದಿರಲಿಲ್ಲ. ಆಕೆ ನನ್ನ ಬೆಸ್ಟ್ ಫ್ರೆಂಡ್. ಸಮಂತಾರಿಗೆ ಒಳ್ಳೆಯ ಮನಸ್ಸಿದೆ ಎಲ್ಲರನ್ನೂ ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ.

ಮೈಯೋಸಿಟಿಸ್ ಬಗ್ಗೆ ಎಲ್ಲರೂ ಗೊತ್ತಾದಾಗಲೇ ನನಗೂ ತಿಳಿದದ್ದು. ಸಮಂತಾ ತಮ್ಮ ಜೀವನದಲ್ಲಿ ಅನೇಕ ಸವಾಲುಗಳನ್ನು ಧೈರ್ಯದಿಂದ ಎದುರಿಸಿದ್ದಾರೆ. ಆಕೆಯೇ ನನಗೆ ಸ್ಪೂರ್ತಿ. ಆಕೆಯನ್ನು ನಾನು ತಾಯಿ ಆರೈಕೆ ಮಾಡುವ ಹಾಗೆ ನೋಡಿಕೊಳ್ಳಲು ಬಯಸುತ್ತಿದ್ದೇನೆ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತಿದ್ದೇನೆ ಎಂದು ಕಮೆಂಟ್‌ ಮಾಡಿದ್ದಾರೆ. ರಶ್ಮಿಕಾ ಕಾಮೆಂಟ್‌ಗಳಿಂದ ಸಮಂತಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!