ರಶ್ಮಿಕಾ ಮಂದಣ್ಣ ಮಾಡಿದ ಒಳ್ಳೆ ಕೆಲಸಕ್ಕೆ ಫಿದಾ ಆದ ನೆಟ್ಟಿಗರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಶ್ಮಿಕಾ ಮಂದಣ್ಣ ಸದಾ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ. ಅನೇಕ ಬಾರಿ ತಾವು ಮಾಡುವ ಎಡವಟ್ಟಿನಿಂದ ನೆಟ್ಟಿಗರ ಕಣ್ಣಿಗೆ ಗುರಿಯಾಗುತ್ತಾರೆ.

ಆದ್ರೆ ಇದೀಗ ಇಷ್ಟೂ ಸಮಯ ಬೈತಿದ್ದ ನೆಟಿಜನ್ಸ್‌ ರಶ್ಮಿಕಾನ ಹೊಗಳೋಕೆ ಶುರು ಮಾಡಿದ್ದಾರೆ. ಇದಕ್ಕೆ ಕಾರಣ ಈಕೆ ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಕೈಗೊಳ್ತಿರೋ ಜಾಗೃತಿ ಅಭಿಯಾನ.

ರಶ್ಮಿಕಾ ತಮ್ಮ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಹೆಸರನ್ನು ಉಲ್ಟಾ ಬರೆಯುವುದರ ಮೂಲಕ ಎಲ್ಲರಲ್ಲೂ ಪ್ರಶ್ನೆ ಮೂಡಿಸಿದ್ದರು. ಈ ರೀತಿ ಪೋಸ್ಟ್ ಮಾಡಲು ಕಾರಣ ಏನಿರಬಹುದು ಎನ್ನುವ ಚರ್ಚೆ ಕೂಡ ನಡೆಯಿತು.ಆದರೆ, ರಶ್ಮಿಕಾ ತಮ್ಮ ಹೆಸರನ್ನು ಉಲ್ಟಾ ನೇತು ಹಾಕಿದ್ದಕ್ಕೆ ಕಾರಣ ಬೇರೆ ಇದೆ. ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೇಳುವ ಅಭಿಯಾನವನ್ನು ಆರಂಭಿಸಿದ್ದಾರೆ. ಅಕ್ಷರ ಬಾರದ ಹೆಣ್ಣುಮಕ್ಕಳಿಗೆ ಅಕ್ಷರಗಳು ಉಲ್ಟಾ ಕಾಣುತ್ತವೆ ಎಂದು ಹೇಳುವುದಕ್ಕಾಗಿ ಅವರು ತಮ್ಮ ಹೆಸರನ್ನು ಉಲ್ಟಾ ಬರೆದಿದ್ದರು. ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಓದು ಬಾರದ ಹೆಣ್ಣು ಮಕ್ಕಳ ಪರ ರಶ್ಮಿಕಾ ಅಭಿಯಾನ ಶುರು ಮಾಡಿದ್ದಾರೆ. ಪ್ರತಿ ಹೆಣ್ಣು ಮಗುವಿಗೂ ಶಿಕ್ಷಣ ಕೊಡಿ ಎಂದು ಸಾರುತ್ತಾರೆ. ಈ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ. ರಶ್ಮಿಕಾ ಅವರ ಈ ಅಭಿಯಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಪೋಸ್ಟ್ ಜೊತೆ ತನ್ನ ಬಾಲ್ಯದ ಫೋಟೋವನ್ನೂ ರಶ್ಮಿಕಾ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!