ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಈಗ ತಮ್ಮನ್ನು ತಾವೇ ಸೈಕೋ ಎಂದುಕೊಂಡು ಮತ್ತೆ ಸುದ್ದಿಯಲ್ಲಿದ್ದಾರೆ.
ರಶ್ಮಿಕಾ ಸೋಶಿಯಲ್ ಮಿಡಿಯಾದಲ್ಲಿ ತಮ್ಮ ಫೋಟೋ ಒಂದನ್ನು ಹಂಚಿಕೊಂಡಿದ್ದು, ಅದಕ್ಕೆ ಅವರು ಕೊಟ್ಟ ಕ್ಯಾಪ್ಷನ್ ಈಗ ನೆಟ್ಟಿಗರ ಗಮನ ಸೆಳೆದಿದೆ.
ನಾನು ಜಿಮ್ ನಲ್ಲಿಯೇ ಜೀವಿಸುವ ಸೈಕೋ ಎಂದು ಸಾಬೀತಾಗಿದೆ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಇದರೊಂದಿಗೆ ತಾವು ಜಿಮ್ ನಲ್ಲಿ ಕ್ಲಿಕ್ಕಿಸಿದ ಫೋಟೋವನ್ನು ಶೇರ್ ಮಾಡಿದ್ದಾರೆ.
ಈ ಫೋಟೊ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದು, ತುಂಬಾ ಚೆನ್ನಾಗಿ ಕಾಣಿಸುತ್ತಿದ್ದೀರ ಎಂದು ಕಮೆಂಟ್ ಮಾಡಿದ್ದಾರೆ.