April 4, 2026
Saturday, April 4, 2026
spot_img

ಉದಯಪುರದಲ್ಲಿ ರಶ್ಮಿಕಾ-ವಿಜಯ್ ಕಲ್ಯಾಣೋತ್ಸವ! ಕಡೆಗೂ ವೆಡ್ಡಿಂಗ್ ಫೋಟೋಸ್ ರಿವೀಲ್ ಮಾಡೇಬಿಟ್ರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಭಾರತದ ಮೋಸ್ಟ್ ಬ್ಯೂಟಿಫುಲ್ ಕಪಲ್ ಎಂದೇ ಖ್ಯಾತರಾಗಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಫೆಬ್ರವರಿ 26ರಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಜೋಡಿ ಹಸೆಮಣೆ ಏರಿದೆ.

ತೆಲುಗು ಸಂಪ್ರದಾಯದಂತೆ ವಿವಾಹ ಮಹೋತ್ಸವ ಜರುಗಿದೆ. ಕೇವಲ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರು ಸೇರಿದಂತೆ ಸುಮಾರು 100 ಜನರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ಕೊನೆಯ ಕ್ಷಣದವರೆಗೂ ಮದುವೆಯ ವಿಷಯವನ್ನು ಅತ್ಯಂತ ಗೌಪ್ಯವಾಗಿಡಲಾಗಿತ್ತು. ಮದುವೆಯ ನಂತರ ರಶ್ಮಿಕಾ ಮತ್ತು ವಿಜಯ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುತ್ತಿದ್ದಂತೆ, ಅಭಿಮಾನಿಗಳು ‘ವಿರೋಶ್’ ಜೋಡಿಗೆ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

‘ಗೀತಾ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳ ಮೂಲಕ ತೆರೆಮೇಲೆ ಮೋಡಿ ಮಾಡಿದ್ದ ಈ ಜೋಡಿ, ಈಗ ರಿಯಲ್ ಲೈಫ್‌ನಲ್ಲೂ ಒಂದಾಗಿರುವುದು ಸಿನಿಪ್ರಿಯರಿಗೆ ಹಬ್ಬದ ಸಡಗರ ತಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !