ಕಾಂತಾರ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ: ರಿಷಬ್ ಶೆಟ್ಟಿ ಫಸ್ಟ್ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಹಾಗೂ ಯಶ್ ನಟನೆಯ ಕೆಜಿಎಫ್ ಚಿತ್ರಗಳಿಗೆ ಎರಡೆರಡು ರಾಷ್ಟ್ರ ಪ್ರಶಸ್ತಿ ಲಭ್ಯವಾಗಿದ್ದು, ಕನ್ನಡಕ್ಕೆ ಒಟ್ಟು ಆರು ಪ್ರಶಸ್ತಿ ಬಂದಿರುವುದು ಹೆಮ್ಮೆಯ ಸಂಗತಿವಾಗಿದೆ. .

ಕನ್ನಡದ ಕಾಂತಾರ, ಕೆಜಿಎಫ್ ಚಿತ್ರಗಳು ತಲಾ ಎರಡು ಪ್ರಶಸ್ತಿ ಹಾಗೂ ಮದ್ಯಂತರ, ಅತ್ಯುತ್ತಮ ಸಂಕಲನ ಸುರೇಶ್ ಅರಸ್ ಅವರಿಗೆ ಪ್ರಶಸ್ತಿ ಪ್ರಕಟವಾಗಿದೆ.

ರಾಷ್ಟ್ರ ಪ್ರಶಸ್ತಿ ಪ್ರಕಟವಾಗುತ್ತಿದ್ದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ರಿಷಬ್ ಶೆಟ್ಟಿ, ಕಾಂತಾರ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದು ಖುಷಿಯಾಗಿದೆ. ಘೋಷಣೆ ಮಾಡುವಾಗಲೇ ಪ್ರಶಸ್ತಿ ಬಂದಿದೆ ಎಂದು ಗೊತ್ತಾಗಿದೆ. ಈ ಪ್ರಶಸ್ತಿ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದರು.

ಕಾಂತಾರ ಚಿತ್ರಕ್ಕೆ ಎರಡು ಹಾಗೂ ಕೆಜಿಎಫ್ ಚಿತ್ರಕ್ಕೆ ಎರಡು ಪ್ರಶಸ್ತಿ, ಈ ಮೂಲಕ ಹೊಂಬಾಳೆ ಫಿಲ್ಮ್ಸ್ ಗೆ ನಾಲ್ಕು ರಾಷ್ಟ್ರ ಪ್ರಶಸ್ತಿ ಸಿಕ್ಕಂತಾಗಿದೆ. ಕಾಂತಾರ ಚಿತ್ರಕ್ಕೆ ಸಿಕ್ಕ ಈ ಪ್ರಶಸ್ತಿಯನ್ನು ಇಡೀ ಚಿತ್ರತಂಡಕ್ಕೆ ಅರ್ಪಿಸುತ್ತೇನೆ. ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಕನ್ನಡ ಚಿತ್ರಗಳಿಗೆ ಪ್ರಶಸ್ತಿ ಸಿಕ್ಕಿರುವುದು ಅತ್ಯಂತ ಸಂತಸವಾಗಿದೆ. ವರಮಹಾಲಕ್ಷ್ಮೀ ಹಬ್ಬದ ದಿನದಂದು ಪ್ರಶಸ್ತಿ ಬಂದಿರುವುದು ಖುಷಿಯ ವಿಚಾರ ಎಂದು ಸಂತಸ ಹಂಚಿಕೊಂಡಿದ್ದಾರೆ.

ಈ ಹಿಂದೆ ಸರ್ಕಾರಿ ಹಿ. ಪ್ರಾ. ಶಾಲೆ. ಕಾಸರಗೋಡು’ ಚಿತ್ರಕ್ಕೆ ಪ್ರಶಸ್ತಿ ಬಂದಾಗ ಇನ್ನೂ ಹೆಚ್ಚು ಪ್ರಯತ್ನ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆ. ಒಂದು ಒಳ್ಳೆಯ ಸಿನಿಮಾ ಮಾಡುವಾಗ ಒಳ್ಳೆಯ ತಂಡ ಮುಖ್ಯ ಕೂಡ. ಒಬ್ಬರಿಂದ ಸಿನಿಮಾ ಸಕ್ಸೆಸ್‌ ಆಗಲು ಸಾಧ್ಯವಿಲ್ಲ. ಈ ಪ್ರಶಸ್ತಿ ದೈವಕ್ಕೆ ಸಲ್ಲಬೇಕು. ದೈವಕ್ಕೆ ನಾನು ಪ್ರಶಸ್ತಿ ಸಲ್ಲಿಸುತ್ತೇನೆ. ಕಾಂತಾರ ಸಿನಿಮಾಗೆ ನಿಮ್ಮಲ್ಲೆರ ಸಪೋರ್ಟ್‌ ಇತ್ತು. ಮುಂದೆ ಕೂಡ ಹೀಗೆ ಬೆಂಬಲ ಇರಲಿ ಎಂದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!