ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಶಾನ್ಯ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿ ನಾಲ್ವರು ಸಾವನ್ನಪ್ಪಿರುವ ದುರಂತ ಘಟನೆ ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ನಿಲ್ದಾಣದ ಬಳಿ ಬುಧವಾರ ರಾತ್ರಿ ನಡೆದಿದೆ. ಈ ಅವಘಡದ ಬಳಿಕ ರಕ್ಷಣಾ ಕಾರ್ಯಾಚರಣೆ ಮತ್ತು ಪರಿಹಾರ ಕಾರ್ಯದಲ್ಲಿ ರಾ.ಸ್ವ. ಸಂಘದ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ದೆಹಲಿಯ ಆನಂದ್ ವಿಹಾರ್ ಟರ್ಮಿನಲ್‌ನಿಂದ ಅಸ್ಸಾಂನ ಗುವಾಹಟಿಯ ಕಾಮಾಖ್ಯ ಜಂಕ್ಷನ್‌ಗೆ ಪ್ರಯಾಣಿಸುತ್ತಿದ್ದ ಈಶಾನ್ಯ ಎಕ್ಸ್‌ಪ್ರೆಸ್ ರೈಲಿನ ಆರು ಬೋಗಿಗಳು ಬುಧವಾರ ರಾತ್ರಿ 9:53ಕ್ಕೆ ಹಳಿತಪ್ಪಿದವು. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ರೈಲ್ವೆ ಸಚಿವಾಲಯ ತಿಳಿಸಿದೆ.