ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ: ರಾಜ್ಯದ 51 ಕಡೆ ಸಿಐಡಿ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

2012-13, 2014-15 ರ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ವಿಶೇಷ ತನಿಖಾ ತಂಡ ದಾಳಿ ನಡೆಸಿ 38 ಮಂದಿ ಶಿಕ್ಷಕರನ್ನು ಬಂಧಿಸಿದ್ದಾರೆ.
ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಂಬಂಧಿಸಿ ರಾಜ್ಯದ 51 ಕಡೆ ದಾಳಿ ನಡೆಸಿದ್ದಾರೆ.
ಕೋಲಾರದಲ್ಲಿ 24, ಬೆಂಗಳೂರು ದಕ್ಷಿಣದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 4 , ಚಿತ್ರದುರ್ಗದಲ್ಲಿ 5 ಮಂದಿ ಸೇರಿ ಒಟ್ಟು 38 ಮಂದಿ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ(CID)ಅಧಿಕಾರಿಗಳು ವಿವಿಧ ಜಿಲ್ಲೆಯ ಹಲವು ಶಾಲೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!