ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೈಗಾರಿಕೋದ್ಯಮಿ ರತನ್ ಟಾಟಾ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ರತನ್ ಟಾಟಾ ಅವರ ನಿಧನದ ಕುರಿತು ಏಕನಾಥ್ ಶಿಂಧೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಟಾಟಾ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂದು ಮಹಾರಾಷ್ಟ್ರದಲ್ಲಿ ಶೋಕಾಚರಣೆ ಮಾಡಲಾಗುತ್ತದೆ. ಗೌರವ ಸೂಚಕವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಇಂದು ನಿಗದಿಯಾಗಿದ್ದ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
खो गया देश का अनमोल रत्न
रतनजी टाटा नैतिकता और उद्यमशीलता के अपूर्व और आदर्श संगम थे.लगभग 150 वर्षों की उत्कृष्टता और अखंडता की परंपरा वाले टाटा ग्रुप की कमान सफलतापूर्वक संभालने वाले रतनजी टाटा एक जीवित किवदंती थे.उन्होंने समय-समय पर जिस निर्णय क्षमता और मानसिक दृढ़ता का परिचय… https://t.co/u6MdkdheCC
— Eknath Shinde – एकनाथ शिंदे (@mieknathshinde) October 9, 2024