ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರಿಗೆ ಆಸ್ಟ್ರೇಲಿಯಾ ಸರ್ಕಾರವು ಅತ್ಯುನ್ನತ ನಾಗರಿಕ ಪ್ರಶಸ್ತಿ (Order of Australia) ನೀಡಿ ಗೌರವಿಸಿದೆ.
ಆಸ್ಟ್ರೇಲಿಯಾದ (Australia) ರಾಯಭಾರಿ ಬ್ಯಾರಿ ಓ ಫಾರೆಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ರತನ್ ಟಾಟಾರನ್ನು ಉದ್ಯಮ, ವ್ಯಾಪಾರ ಹಾಗೂ ಲೋಕೋಪಕಾರದ ದೈತ್ಯ ಎಂದು ಶ್ಲಾಘಿಸಿದರು. ಅವರ ಕೊಡುಗೆಗಳು ಆಸ್ಟ್ರೇಲಿಯಾದಲ್ಲಿ ಮಹತ್ವದ ಪ್ರಭಾವ ಬೀರಿವೆ ಎಂದು ತಿಳಿಸಿದರು.
Ratan Tata is a titan of biz, industry & philanthropy not just in 🇮🇳, but his contributions have also made a significant impact in 🇦🇺. Delighted to confer Order of Australia (AO) honour to @RNTata2000 in recognition of his longstanding commitment to the 🇦🇺🇮🇳relationship. @ausgov pic.twitter.com/N7e05sWzpV
— Barry O’Farrell AO (@AusHCIndia) April 22, 2023
ರತನ್ ಟಾಟಾ ಅವರ ಉದ್ಯಮ ಮತ್ತು ಲೋಕೋಪಕಾರದ ಟೈಟನ್ ಆಗಿದ್ದಾರೆ. ಅವರ ಕೊಡುಗೆಗಳು ಆಸ್ಟ್ರೇಲಿಯಾದಲ್ಲಿಯೂ ಗಮನಾರ್ಹ ರೀತಿಯಲ್ಲಿ ಪ್ರಭಾವ ಬೀರಿವೆ. ಆಸ್ಟ್ರೇಲಿಯಾ-ಭಾರತ ಸಂಬಂಧಕ್ಕೆ ರತನ್ ಟಾಟಾ ಅವರ ದೀರ್ಘಕಾಲದ ಶ್ರಮವನ್ನು ಗುರುತಿಸಿ Order of Australia ಗೌರವವನ್ನು ನೀಡಲು ಸಂತೋಷವಾಗಿದೆ ಎಂದು ಹೇಳಿದರು.
ಫಾರೆಲ್ ತಮ್ಮ ಟ್ವೀಟ್‍ನಲ್ಲಿ ರತನ್ ಟಾಟಾ ಅವರನ್ನು ಗೌರವಿಸುವ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ. ಭಾರತದಲ್ಲಿ ಆಸ್ಟ್ರೇಲಿಯನ್ ರಾಯಭಾರಿ ಹಂಚಿಕೊಂಡ ಫೋಟೋಗಳಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಸಹ ಕಾಣಿಸಿಕೊಂಡಿದ್ದಾರೆ.