ರತನ್‌ ಟಾಟಾ ವಿಧಿವಶ: ಇಂದು ಮಧ್ಯಾಹ್ನದವರೆಗೆ ಮುಂಬೈಯಲ್ಲಿ ಸಾರ್ವಜನಿಕ ದರುಶನಕ್ಕೆ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಟಾಟಾ ಗ್ರೂಪ್‌ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾಗಿದೆ. ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3.30ರವರೆಗೆ ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಎಲ್ಲಾ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!