ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದು ಟಾಟಾ ಅವರ ಆಸೆಯಾಗಿತ್ತು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ಅ.9 ರಂದು ಕೊನೆಯುಸಿರೆಳೆದರು. ಅ.10 ರಂದು ಅಂತಿಮ ವಿಧಿವಿಧಾನಗಳನ್ನು ಮುಂಬೈನ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು.
ಇದೀಗ ಅವರ ಆಸೆಯಂತೆ ಅವರ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸುವುದಾಗಿ ಟಾಟಾ ಕುಟುಂಬ ನಿರ್ಧಾರ ಕೈಗೊಂಡಿದೆ. ಮುಂಬೈನ ಗೇಟ್ ವೇ ಆಫ್ ಇಂಡಿಯಾದಿಂದ ಹಡಗಿನಲ್ಲಿ ಮೆರವಣಿಗೆಯ ಮೂಲಕ ಚಿತಾ ಭಸ್ಮವನ್ನು ವಿಸರ್ಜಿಸಲಾಗುವುದು. ಈ ಸಂದರ್ಭದಲ್ಲಿ ಅವರ ಕುಟುಂಬ, ಅವರ ಸ್ನೇಹಿತರು ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.