ಭಾರತ ರತ್ನ ಪ್ರಶಸ್ತಿಗೆ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಾರಾಷ್ಟ್ರ ಸರ್ಕಾರ ಇಂದು ನಡೆದ ಸಂಪುಟ ಸಭೆಯಲ್ಲಿ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಪ್ರಸ್ತಾಪಿಸಲು ನಿರ್ಧರಿಸಿದೆ.

ಇಂದು ರಾಜ್ಯ ಸಚಿವ ಸಂಪುಟದಲ್ಲಿ ಟಾಟಾ ಅವರಿಗೆ ಸಂತಾಪ ಸೂಚಿಸುವ ಪ್ರಸ್ತಾವನೆಯನ್ನೂ ಅಂಗೀಕರಿಸಲಾಗಿದೆ. ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಇರಿಸಲಾಗಿರುವ ಮುಂಬೈನ ಎನ್‌ಸಿಪಿಎ ಹುಲ್ಲುಹಾಸಿಗೆ ಎಲ್ಲ ಪಕ್ಷಗಳ ನಾಯಕರು ಆಗಮಿಸುತ್ತಿದ್ದಾರೆ.

ಸಂಪುಟ ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ. ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾಗೆ ಭಾರತ ರತ್ನ ನೀಡಬೇಕೆಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನೂ ಸಂಪುಟ ಅಂಗೀಕರಿಸಿತು. ಟಾಟಾ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿಯನ್ನು ಈಗಾಗಲೇ ನೀಡಲಾಗಿದೆ.

ಸಮಾಜದ ಬೆಳವಣಿಗೆಗೆ ಉದ್ಯಮಶೀಲತೆ ಪರಿಣಾಮಕಾರಿ ಮಾರ್ಗವಾಗಿದೆ ಎಂದು ನಿರ್ಣಯವು ಹೇಳಿದೆ. ಹೊಸ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ದೇಶವನ್ನು ಪ್ರಗತಿ ಮತ್ತು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಬಹುದು. ಇದಕ್ಕೆ ದೇಶ ಪ್ರೇಮ ಮತ್ತು ಸಮಾಜದ ಉನ್ನತಿಗಾಗಿ ಪ್ರಾಮಾಣಿಕ ಭಾವನೆಗಳೂ ಬೇಕು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!