ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆದ ಆರೋಪ ಕೇಳಿಬಂದಿದೆ.
ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದ 130ಕ್ಕೂ ಹೆಚ್ಚು ಯುವಕ, ಯುವತಿಯರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಸುಮಾರು ಮಧ್ಯರಾತ್ರಿ 3ಗಂಟೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪಾರ್ಟಿಯಲ್ಲಿ ಮಾದಕ ವಸ್ತುಗಳ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಗಳಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ಹೋಮ್ ಸ್ಟೇ, ಸುಹಾಸ್ ಗೌಡ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.
ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ರಾತ್ರಿ ವೇಳೆ ರೇವ್ ಪಾರ್ಟಿ ನಡೆಯುತ್ತಿದೆ ಎನ್ನುವ ಮಾಹಿತಿ ಮೇರೆಗೆ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ, 35 ಯುವತಿಯರು ಸೇರಿದಂತೆ ಒಟ್ಟು 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಎಲ್ಲರನ್ನೂ ಬಂಧಿಸಿ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ದಾಳಿ ವೇಳೆ ಮಾಧ್ಯಮ ಮತ್ತು ಇತರರು ವಿಡಿಯೋ ಚಿತ್ರೀಕರಣ ಮಾಡಲು ಯತ್ನಿಸಿದಾಗ ಪೊಲೀಸರು ಚಿತ್ರೀಕರಣ ತಡೆದಿದ್ದಾರೆ.
BIG NEWS | ರಾಮನಗರದಲ್ಲಿ ರೇವ್ ಮೋಜು ಮಸ್ತಿ? 130ಕ್ಕೂ ಹೆಚ್ಚು ಜನರ ಬಂಧನ

