ದೇವನಹಳ್ಳಿ ಪಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ: ಪೊಲೀಸರ ದಾಳಿ, ಯುವಕ, ಯುವತಿಯರು ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಚಿಕ್ಕಬಳ್ಳಾಪುರ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿಯ ಪಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿ ಈ ವೇಳೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಲಯ ಡಿಸಿಪಿ ವಿ.ಜೆ.ಸಜೀತ್ ಅವರು ಪ್ರತಿಕ್ರಿಯೆ ನೀಡಿದ್ದು, ‘NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ದೇವನಹಳ್ಳಿಯ ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ಮುಂಜಾನೆ 5 ಗಂಟೆ ಸಮಯದಲ್ಲಿ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರ ಬರ್ತ್ ಡೇ ಸೆಲೆಬ್ರೇಷನ್​ಗಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಇಡೀ ರಾತ್ರಿ ಮಾದಕ ವಸ್ತುಗಳನ್ನು ಬಳಕೆ ಮಾಡಿರುವುದು ಕಂಡುಬಂದಿದೆ. 24 ಯುವಕರು 7 ಯುವತಿಯರು ಸೇರಿದಂತೆ ಒಟ್ಟು 31 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.

31 ಜನರ ರಕ್ತ ಮತ್ತು ಮೂತ್ರದ ಸ್ಯಾಂಪಲ್ ಸಂಗ್ರಹಿಸಿ ಎಫ್​ಎಸ್​ಎಲ್ ವರದಿಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಪಾರ್ಟಿಯಲ್ಲಿ ಭಾಗವಹಿಸಿದ ಕೆಲವರಲ್ಲಿ ಅಲ್ಪ ಪ್ರಮಾಣದ ಕೊಕೇನ್ ಸೇರಿದಂತೆ ಮಾದಕ ವಸ್ತುಗಳು ಸಿಕ್ಕಿದ್ದು, ಜಪ್ತಿ ಮಾಡಲಾಗಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!