ರೇವ್‌ ಪಾರ್ಟಿ ಪ್ರಕರಣ: ನಟಿ ಹೇಮಾಗೆ 14 ದಿನ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರೇವ್‌ ಪಾರ್ಟಿ ಪ್ರಕರಣದಲ್ಲಿ ಇಂದು ಬಂಧನವಾಗಿದ್ದ ತೆಲುಗು ನಟಿ ಹೇಮಾ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದಾರೆ.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!