ರೇವ್ ಪಾರ್ಟಿ ಪ್ರಕರಣ: 24 ಗಂಟೆಗಳ ಕಾಲ ನಟಿ ಹೇಮಾ ಸಿಸಿಬಿ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ರೇವ್ ಪಾರ್ಟಿ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ನಟಿ ಹೇಮಾರನ್ನ ವಶಕ್ಕೆ ಪಡೆದಿದ್ದಾರೆ.

ನಟಿ ಹೇಮಾ ಅವರನ್ನು 24 ಗಂಟೆ ಸಿಸಿಬಿ ಕಸ್ಟಡಿಗೆ ನೀಡಿ ಅನೇಕಲ್ ನ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನಟಿ ಹೇಮಾ ಹೆಸರು ಕೇಳಿ ಬಂದಾಗ ಆಕೆ ಆ ಸಂದರ್ಭದಲ್ಲಿ ನಾನು ಹೈದರಾಬಾದ್ ಫಾರ್ಮ್ ಹೌಸ್ ನಲ್ಲಿ ಇದ್ದೆ ಎಂದು ಹೇಳಿದ್ದರು.ಆದರೆ ಸಿಸಿಬಿ ಪೊಲೀಸರು ತಮಗೆ ಸಿಕ್ಕ ಖಚಿತ ಸಾಕ್ಷ್ಯಾಧಾರಗಳ ಮೇಲೆ ಹಾಗೂ ವೈದ್ಯಕೀಯ ಪರೀಕ್ಷೆ ಮೊದಲಾದವನ್ನು ಪರಿಗಣಿಸಿ ಹೇಮಾ ವಿಚಾರಣೆಗೆ ಹಾಜರಾದ ವೇಳೆ ಅವರನ್ನು ಬಂಧಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!