ಹೊಸದಿಗಂತ ಡಿಜಿಟಲ್ ಡೆಸ್ಕ್ :
ರೇವ್ ಪಾರ್ಟಿ ಪ್ರಕರಣದಲ್ಲಿ (ಬಂಧನವಾಗಿದ್ದ ತೆಲುಗು ನಟಿ ಹೇಮಾ ಅವರ ಸಿಸಿಬಿ ಕಸ್ಟಡಿ ಅಂತ್ಯಗೊಂಡಿದ್ದು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಅವರು ಸಿಸಿಬಿ ಅಧಿಕಾರಿಗಳು ಒಂದು ದಿನದ ಕಸ್ಟಡಿಗೆ ತೆಗೆದುಕೊಂಡಿದ್ದರು. ಗುರುವಾರ ಆ ಅವಧಿ ಮುಕ್ತಾಯಗೊಂಡ ಕಾರಣ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಈ ಹಿಂದೆ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು ನಟಿ ಹೇಮಾ ಅವರನ್ನು ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದರು.
ಗುರುವಾರ ಆನೇಕಲ್ ಕೋರ್ಟ್‌ಗೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಹಾಜರುಪಡಿಸಿದ್ದರು. ಆನೇಕಲ್‌ನ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.