ರೇವ್ ಪಾರ್ಟಿ ಪ್ರಕರಣ: ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ನಟಿ ಹೇಮಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 
 
ಬೆಂಗಳೂರಿನ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟಿ, ನನಗೆ ವೈರಲ್ ಫೀವರ್ ಇದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆ.

ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಈಗಾಗಲೇ ನೋಟಿಸ್ ಜಾರಿ ಮಾಡಿದ್ದಾರೆ.

ಹೇಮಾ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶ ಕೋರಿದ್ದರಂತೆ. ಆದರೆ, ಆಕೆಯ ಮನವಿಯನ್ನು ಸಿಸಿಬಿ ಪೊಲೀಸರು ಪರಿಗಣಿಸಿಲ್ಲ. ಮತ್ತೆ ಹೊಸದಾಗಿ ನೋಟಿಸ್ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಸೋಮವಾರ ಬೆಳಗ್ಗೆ ನಟಿ ಹೇಮಾ ಫೇಸ್ ಬುಕ್ ನಲ್ಲಿ ಲೈವ್ ನಲ್ಲಿ ಮಾತನಾಡಿದ್ದಾರೆ. ನಾವು ಎಲ್ಲಿಯವರೆಗೆ ತಪ್ಪುಗಳನ್ನು ಮಾಡುವುದಿಲ್ಲವೋ ಅಲ್ಲಿಯವರೆಗೆ ನಾವು ಇತರರಿಗೆ ಭಯಪಡುವ ಅಗತ್ಯವಿಲ್ಲ. ತಪ್ಪು ಮಾಡಿದರೂ ನಾವು ದೇವರಲ್ಲ. ತಪ್ಪಿದ್ದರೆ ಕ್ಷಮಿಸಿ, ಆಗ ನಾವು ಫ್ರೆಶ್ ಆಗುತ್ತೇವೆ. ಒಂದು ಸುಳ್ಳು ಹೇಳಿದರೆ ಅದನ್ನು ಮುಚ್ಚಿಡಲು 100 ಸುಳ್ಳುಗಳನ್ನು ಆಡಬೇಕು. 99 ಪ್ರತಿಶತ ಸುಳ್ಳುಗಳನ್ನು ಉತ್ತಮವಾಗಿ ತಪ್ಪಿಸಲಾಗುತ್ತದೆ. ಅದಕ್ಕಾಗಿಯೇ ನಾನು ಯಾವಾಗಲೂ ಸಂತೋಷವಾಗಿರುತ್ತೇನೆ. ಸದ್ಯಕ್ಕೆ ನನ್ನ ಬಳಿ ಯಾವುದೇ ಶೂಟಿಂಗ್ ಇಲ್ಲ. ತುಂಬಾ ಅರ್ಜೆಂಟ್ ಇದ್ದರೆ ಮಾತ್ರ ಹೋಗುತ್ತಿದ್ದೇನೆ ಎಂದು ಹೇಮಾ ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!