ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮುಂಬೈನ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಿವುಡ್ ನ ಖ್ಯಾತ ನಿರ್ಮಾಪಕ ಇಮ್ತಿಯಾಜ್ ಖಾತ್ರಿ ಅವರ ನಿವಾಸದ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಖಾತ್ರಿ ಅವರ ನಿವಾಸದ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ರೇಟ್ ಪಾರ್ಟಿ ಪ್ರಕರಣದಲ್ಲಿ ಖಾತ್ರಿ ಕೂಡ ಭಾಗಿಯಾಗಿದ್ದಾರೆ ಎಂದು ಎನ್ ಸಿಬಿ ಸಂಸ್ಥೆ ಆರೋಪಿಸಿದೆ.
ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಎಂಟು ಮಂದಿಯನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.