ಹೊಸ ದಿಗಂತ ವರದಿ , ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಮುಂಗಾರು ವಿಳಂಬದಿಂದ ಹಾಗೂ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಬೆಳೆ ಹಾನಿಗೊಳಗಾಗಿರುವ ರೈತರಿಗೆ ಪರಿಹಾರ ಘೋಷಿಸಬೇಕು ಎಂದು ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಎನ್.ಎ.ರವಿ ಬಸಪ್ಪ ಒತ್ತಾಯಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಲುಕಿದ್ದುಡಗಿನಲ್ಲಿ ಮುಂಗಾರು ವಿಳಂಬವಾಗಿ ಆರಂಭವಾಗಿದ್ದು,ಇದರಿಂದಾಗಿ ಕಾಫಿ,ಕರಿಮೆಣಸು ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಇದೀಗ ವಿಳಂಬವಾಗಿ ಆರಂಭವಾದ ಮಳೆ ಒಂದೇ ಸಮನೆ ಬೀಳುತ್ತಿರುವುದರಿಂದ ತೋಟಗಳ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಮುಂಗಾರು ವಿಳಂಬದಿಂದ ಹಾಗೂ ಅತಿಯಾದ ಮಳೆಯಿಂದ ಭತ್ತದ ಕೃಷಿಕರೂ ಸಂಕಷ್ಟಕ್ಕೆ ಸಿಲುಕಿದ್ದು, ಈ ಹಿನ್ನೆಲೆಯಲ್ಲಿ ಸರಕಾರ ರೈತರ ಹಾಗೂ ಬೆಳೆಗಾರರಿಗೆ ಪರಿಹಾರ ಘೋಷಿಸುವ ಮೂಲಕ ನೆರವಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ