spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪರಿಷತ್ ಚುನಾವಣೆ: ಬಿಜೆಪಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದ ರವಿಕುಮಾರ್

- Advertisement -Nitte

ಹೊಸದಿಗಂತ ವರದಿ, ಮೈಸೂರು:

ವಿಧಾನಪರಿಷತ್‌ನ 25 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.
ಗುರುವಾರ ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ 25 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ 15 ರಿಂದ 16 ಸ್ಥಾನಗಳನ್ನು ಗೆಲ್ಲಲಿದೆ. ವಿಧಾನ ಪರಿಷತ್ ನಲ್ಲಿ ಬಹುಮತ ಸಾಬೀತು ಮಾಡಲು 12 ಸ್ಥಾನಗಳು ಮಾತ್ರ ಅವಶ್ಯಕತೆ ಇದೆ. ಈ ಬಾರಿಯ ಚುನಾವಣೆಯಲ್ಲಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಬಹುಮತ ಗಳಿಸುವ ವಿಶ್ವಾಸ ಇದೆ. ರಾಜ್ಯದಲ್ಲಿ ನಡೆದ ಜನಸ್ವರಾಜ್ ಯಾತ್ರೆ ಯಶಸ್ವಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ಜೆಡಿಎಸ್ 7ಕ್ಷೇತ್ರಗಲ್ಲಿ ಮಾತ್ರ ಸ್ಪರ್ಧಿಸಿದೆ. ಉಳಿದ ಸ್ಥಾನಗಳಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಅವರಿಗೆ ಬೆಂಬಲ ನೀಡಲು ವಿನಂತಿ ಮಾಡುತ್ತೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾಗೆ ಬಿಜೆಪಿ ಬಾಹ್ಯ ಬೆಂಬಲ ನೀಡಿತ್ತು. ಹಾಗಾಗಿ ಈ ಬಾರಿಯ ಪರಿಷತ್ ಚುನಾವಣೆಗೆ ಬಿಜೆಪಿ ಬೆಂಬಲಿಸುವoತೆ ಮನವಿ ಮಾಡುತ್ತೇವೆ. ಅವರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ, ಮುಂದೆ ಮಾತನಾಡುತ್ತೇವೆ ಎಂದು ತಿಳಿಸಿದರು.
ನೆರೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಕಾಂಗ್ರೆಸ್ ನಾಯಕರು ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಈಗ ನಿರುದ್ಯೋಗಿಗಳ ಕೂಟವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಹಾಗೂ ಸರ್ಕಾರವನ್ನು ಟೀಕೆ ಮಾಡುವುದಷ್ಟೇ ಕೆಲಸ ಎಂದು ವ್ಯಂಗ್ಯವಾಡಿದರು. ಅವರು ರಚನಾತ್ಮಕವಾಗಿ ಟೀಕೆ ಮಾಡಿದರೆ ಸರಿ, ಆದರೆ ಇಲ್ಲ ಸಲ್ಲದ ಟೀಕೆಗಳನ್ನು ಬಿಜೆಪಿ ವಿರುದ್ಧ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ನ ಗೌರವ ಕಡಿಮೆಯಾಗುತ್ತಿದೆಯೇ ವಿನಃ ಬಿಜೆಪಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.
ಬಿಟ್ ಕಾಯಿನ್ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದ ಕಾಂಗ್ರೆಸ್‌ನ ನಾಯಕರು ಈಗ ಸುಮ್ಮನಾಗಿದ್ದಾರೆ. ಜನಸ್ವರಾಜ್ ಯಾತ್ರೆಯನ್ನೂ ಟೀಕಿಸಿದರು. ಇವರು ಟೀಕೆ ಮಾಡುವುದನ್ನು ಬಿಟ್ಟು, ಜನರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದರಾ ಎಂದು ಕಿಡಿಕಾರಿದರು. ಮಳೆ ಹಾನಿ ಪರಿಹಾರವನ್ನು ತಕ್ಷಣವೇ ಸಂತ್ರಸ್ತರಿಗೆ ನೀಡಬೇಕು ಎಂದು ವಿಪಕ್ಷದವರು ಆಗ್ರಹಿಸುತ್ತಿದ್ದಾರೆ. ಆದರೆ ಇವರಿಗೆ ಸರ್ಕಾರದ ನಿಯಮಗಳು, ಪರಿಹಾರ ನೀಡಲು ಇರುವ ನಿಯಮಗಳ ಪಾಲನೆ ಬಗ್ಗೆ ಕನಿಷ್ಠ ಪರಿಜ್ಞಾನವೂ ಇದ್ದಂತಿಲ್ಲ. ಸರ್ಕಾರದ ಆಡಳಿತಕ್ಕೆ ಒಂದು ವೇಗ ಇರುತ್ತದೆ. ಅಧಿಕಾರಿಗಳ ಸಭೆ ನಡೆಸಿ, ಮಾತುಕತೆ ನಡೆಸಿ, ಸಂಬoಧಿಸಿದ ಇಲಾಖೆಯ ಖಾತೆಗೆ ಹಣ ಬಿಡುಗಡೆ ಮಾಡಬೇಕು. ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರಕ್ಕೆಂದು ಕಾರ್ಯವಿಧಾನವಿದೆ. ಆ ಮೂಲಕವೇ ಕೆಲಸ ಮಾಡಬೇಕು, ಪರಿಹಾರವನ್ನು ನೀಡಬೇಕು. ತಕ್ಷಣವೇ ಪರಿಹಾರ ಕೊಡಿ ಎಂದರೆ
ಮುಖ್ಯಮಂತ್ರಿಗಳು ತಮ್ಮ ಜೇಬಿನಲ್ಲಿ ದುಡ್ಡು ಹಿಟ್ಕೊಂಡು ಓಡಾಡುವುದಿಲ್ಲ. ಇದು ಮಾಜಿ ಸಿಎಂಗಳಿಗೆ ಗೊತ್ತು. ಅವರ ಆಡಳಿತದಲ್ಲಿ ನೆರೆ ಹಾವಳಿ ಸಂತ್ರಸ್ತರಿಗೆ ತಮ್ಮ ಮನೆಯಿಂದ ಹಣ ತೆಗೆದುಕೊಂಡು ಹೋಗಿ ಸಂತ್ರಸ್ತರಿಗೆ ಕೊಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು.
ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ನಿಯಮಾನುಸಾರ ಹಾನಿ ವರದಿ ಸಂಗ್ರಹಿಸಿ ಪರಿಹಾರ ನೀಡುತ್ತಾರೆ. ಕಾನೂನಾತ್ಮಕವಾಗಿ ನೆರೆ ಪರಿಹಾರ ನೀಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಘೋಷಿಸಿದ್ದಾರೆ ಎಂದರು. ಈ ವೇಳೆ ಬಿಜೆಪಿ ನಗರಾಧ್ಯಕ್ದ ಟಿ.ಎಸ್.ಶ್ರೀವತ್ಸ ಮತ್ತಿತರರು ಉಪಸ್ಥಿತರಿದ್ದರು.
ನಂತರ ರವಿಕುಮಾರ್ ಅವರು ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಮೈಸೂರು ನಗರ ಪಾಲಿಕೆಯ 65 ವಾರ್ಡ್ಗಳ ಮಹಾ ಶಕ್ತಿ ಕೇಂದ್ರದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ, ಬಿಜೆಪಿ ನಗರಾಧ್ಯಕ್ದ ಟಿ.ಎಸ್.ಶ್ರೀವತ್ಸ ಮತ್ತಿತರರು ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss