`ಕೆಡಿ’ಯಲ್ಲಿ ಗ್ರಾಂಡ್ ಎಂಟ್ರಿ ಕೊಟ್ಟ ರವಿಚಂದ್ರನ್: ಫಸ್ಟ್ ಲುಕ್ ಔಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್‌ವುಡ್‌ನ ಬರುತ್ತಿರುವ ಪ್ರೇಮ್ ನಿರ್ದೇಶನದಲ್ಲಿ `ಕೆಡಿ’ದಲ್ಲಿ ಈಗಾಗಲೇ ಧ್ರುವ ಸರ್ಜಾ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಸಿನಿಮಾಗೆ ಕ್ರೇಜಿ ಸ್ಟಾರ್ ರವಿಚಂದ್ರನ್ ಎಂಟ್ರಿ ಕೊಡ್ತಿದ್ದಾರೆ.

ಕೆವಿಎನ್‌ ನಿರ್ಮಾಣದ ಧ್ರುವ ಸರ್ಜಾ ಮತ್ತು ನಿರ್ದೇಶಕ ಪ್ರೇಮ್ ಕಾಂಬಿನೇಷನ್ ಸಿನಿಮಾ `ಕೆಡಿ’ ಈಗಾಗಲೇ ಸಖತ್ ಸದ್ದು ಮಾಡ್ತಿದೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಯ ಬೆನ್ನಲ್ಲೇ ಈಗ ರವಿಚಂದ್ರನ್ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್ ರವಿಚಂದ್ರನ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!