ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಒಲಂಪಿಕ್ ಚಿನ್ನ ಗೆದ್ದ, ಮಾಜಿ ಹಾಕಿ ಆಟಗಾರ ರವೀಂದರ್ ಪಾಲ್ ಸಿಂಗ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೊರೋನಾ ಸೋಂಕಿನಿಂದ ದೆಹಲಿಯ ವಿವೇಕಾನಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಗುಣಮುಖರಾಗಿದ್ದ ಸಿಂಗ್ ಅವರನ್ನು ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಇದ್ದಕ್ಕಿದ್ದ ಹಾಗೆ ಅವರ ಸ್ಥಿತಿ ಹದಗೆಟ್ಟಿದ್ದು, ವೆಂಟಿಲೇಟರ್ ಅಳವಡಿಸಲಾಯಿತು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ನಿವೃತ್ತರಾಗಿದ್ದರು.
1984 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಆಡಿದ್ದ ಸಿಂಗ್ ಅವಿವಾಹಿತರಾಗಿದ್ದು, ಸೋದರ ಸೊಸೆ, ಪ್ರಜ್ಞಾ ಯಾದವರನ್ನು ಅಗಲಿದ್ದಾರೆ. ಸಿಂಗ್ ಅವರು 1979 ರ ಜೂನಿಯರ್ ವಿಶ್ವಕಪ್ನಲ್ಲಿ ಆಡಿದ್ದರು ಹಾಗೂ ಹಾಕಿಯಿಂದ ನಿವೃತ್ತಿಯಾದ ನಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೌಕರಿಯಿಂದಲೂ ಸ್ವಯಂಪ್ರೇರಿತರಾಗಿ ನಿವೃತ್ತರಾದರು.