ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ (ಬಿ) ಗ್ರಾಮದ ಹೊಲವೊಂದರಲ್ಲಿ ಹಸಿ ಗಾಂಜಾವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು, ಮೂವರನ್ನು ಬಂಧಿಸಲಾಗಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬುರ (ಬಿ) ಗ್ರಾಮದ ದತ್ತು ಸುತಾರ ಎಂಬುವವರ ಹೊಲದಲ್ಲಿ ಹಸಿ ಗಾಂಜಾ ಪತ್ತೆಯಾಗಿದ್ದು,ಟಿನ್ ಶೆಡ್ ಮೇಲೆ ದಾಳಿ ಮಾಡುವ ಮೂಲಕ ೨೬೬೦ ಕೆಜಿ ಹಸಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಹಸಿ ಗಾಂಜಾ ವಶಕ್ಕೆ ಪಡೆದಿದ್ದು, ಜೊತೆಗೆ ಮೌನೇಶ್, ಬೀರಪ್ಪಾ, ಶರಣಪ್ಪಾ ಎಂಬುವವರನ್ನು ಬಂಧನ ಮಾಡಿ, ಎನ್ ಡಿ ಪಿ ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.