Friday, July 1, 2022

Latest Posts

ರಾಯಣ್ಣ, ಶಿವಾಜಿ ಪ್ರತಿಮೆಗೆ ಹಾನಿ ಪ್ರಕರಣಗಳಲ್ಲಿನ ಆರೋಪಿಗಳನ್ನ ಬಂಧಿಸಿದ್ದೇವೆ: ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ವರದಿ, ಹಾವೇರಿ:

ಈಗಾಗಲೆ ಸಂಗೊಳ್ಳಿ ರಾಯಣ್ಣ ಮೂರ್ತಿ, ಶಿವಾಜಿ ಪ್ರತಿಮೆಗೆ ಹಾನಿ ಪ್ರಕರಣಗಳಲ್ಲಿನ ಆರೋಪಿಗಳನ್ನ ಬಂಧಿಸಿದ್ದೇವೆ. ಇದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸ್ತೀವಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿ ಪಂಚಮಸಾಲಿ ಸಮುದಾಯ ಭವನ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ, ಶಿವಾಜಿ ಸೇರಿದಂತೆ ಅನೇಕರು ಭಾಷೆ, ಸಮುದಾಯ ಎಲ್ಲವನ್ನು ಮೀರಿ ಬೆಳೆದವರು. ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಇವರೆಲ್ಲರೂ ದೇಶಭಕ್ತರು. ಇವರು ಭಾಷೆ, ಸಮುದಾಯ ಎಲ್ಲವನ್ನ ಮೀರಿ ನಾಡಿಗಾಗಿ ತಮ್ಮನ್ನು ಸಮರ್ಪಿಸಿಕೊಂಡವರು, ಅವರ ಹೆಸರಿನಲ್ಲಿ ನಾವೆಲ್ಲರೂ ಒಕ್ಕಟ್ಟಾಗಿರಬೇಕು. ದೇಶವನ್ನ ಒಗ್ಗೂಡಿಸಬೇಕು. ಅವರನ್ನು ಯಾವುದೇ ಭಾಷೆ, ಜಾತಿಗೆ ಸೀಮಿತ ಮಾಡಬಾರದು.
ಈಗ ನಡಿಯುತ್ತಿರುವ ಗೊಂದಲದ ಬಗ್ಗೆ ಈಗಾಗಲೆ ಸರಕಾರ ಕ್ರಮ ತೆಗೆದುಕೊಂಡಿದೆ ಎಂದರು.
ಈಗಾಗಲೆ ಸಂಗೊಳ್ಳಿ ರಾಯಣ್ಣ ಮೂರ್ತಿ, ಶಿವಾಜಿ ಮೂರ್ತಿಗೆ ಅವಮಾನ ಮಾಡಿದವರನ್ನು ಬಂಧಿಸಲಾಗಿದೆ. ಇದನ್ನ ನಾವು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಕಾನೂನನ್ನು ಕಟ್ಟುನಿಟ್ಟಾಗಿ ಜರುಗಿಸ್ತೇವೆ. ಕಾನೂನು ಸುವ್ಯವಸ್ಥೆ ಕಾಪಾಡೋದು ನಮ್ಮ ಸರಕಾರದ ಕರ್ತವ್ಯ. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಪತ್ರ ಬರೆದಿರೋ ವಿಚಾರ ನನಗೆ ಗೊತ್ತಿಲ್ಲ. ಸಿಎಂ ಆಗಿ ಗೊತ್ತಿಲ್ಲದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡೋದಿಲ್ಲ. ಅದನ್ನ ತಿಳಿದುಕೊಂಡು ಮಾತನಾಡುವೆ ಎಂದು ಹೇಳಿದರು.
೦-೦-೦-೦-೦-೦-೦

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss