ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳ ಜೊತೆ ಉತ್ಸವಗಳು ಶ್ರೀ ಮಠದಲ್ಲಿ ನಡೆದಿವೆ. ಆರಾಧನಾ ವೈಭವವನ್ನ ಭಕ್ತರು ದೇಶದ ಮೂಲೆಮೂಲೆಯಿಂದ ಆಗಮಿಸಿದ್ದಾರೆ.
ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಪವಿತ್ರ ಕ್ಷೇತ್ರ. ತುಂಗಭದ್ರಾ ತೀರದಲ್ಲಿರೋ ವಿಶೇಷ ಕ್ಷೇತ್ರ. ಈ ಕ್ಷೇತ್ರದಲ್ಲಿ ರಾಯರ ಆರಾಧನೆ ವಿಜೃಂಭಣೆಯಿಂದ ನಡೆಯುತ್ತಿದೆ.
ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾದ ದಿನದ ಹಿಂದಿನ ದಿನವನ್ನ ಪೂರ್ವಾರಾಧನೆಯಾಗಿ ಆಚರಿಸಲಾಗುತ್ತದೆ. ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಸಂಭ್ರಮದಿಂದ ಪೂಜಿಸಲಾಗುತ್ತದೆ. ನಿನ್ನೆಯೂ ಸಹ ಮಠದ ಪ್ರಾಂಗಣದಲ್ಲಿ ರಾಯರು ರಚಿಸಿರುವ ಪರಿಮಳ ಗ್ರಂಥವನ್ನ ಪಲ್ಲಕ್ಕಿಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು. ತಮಿಳುನಾಡಿನ ಶ್ರೀರಂಗಂನ ರಂಗನಾಥಸ್ವಾಮಿ ದೇವಾಲಯದಿಂದ ಬಂದ ಶೇಷವಸ್ತ್ರವನ್ನ ಅದ್ದೂರಿಯಾಗಿ ಸ್ವಾಗತಿಸಲಾಯಿತು, ರಾಯರಿಗೆ ಶೇಷವಸ್ತ್ರ ಸಮರ್ಪಿಸಲಾಯಿತು.