ನೀರಜ್‌ ನಿಗಮ್‌ರನ್ನು ನೂತನ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಿದ ಆರ್‌ಬಿಐ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೋಮವಾರ ನೀರಜ್ ನಿಗಮ್ ಅವರನ್ನು ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ನೇಮಕ ಮಾಡಿದೆ. ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅವರು ಗ್ರಾಹಕ ಶಿಕ್ಷಣ ಮತ್ತು ರಕ್ಷಣೆ ಸೇರಿದಂತೆ ನಾಲ್ಕು ಇಲಾಖೆಗಳನ್ನು ನೋಡಿಕೊಳ್ಳಲಿದ್ದಾರೆ.

ಕಾರ್ಯನಿರ್ವಾಹಕ ನಿರ್ದೇಶಕರಾಗಿ ಬಡ್ತಿ ಪಡೆಯುವ ಮೊದಲು ಅವರು ಆರ್‌ಬಿಐನ ಭೋಪಾಲ್ ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾಗಿದ್ದರು. ಮೂರು ದಶಕಗಳಿಗೂ ಹೆಚ್ಚು ಅವಧಿಯ ಅನುಭವ ಅವರಿಗಿದ್ದು ಈ ಹಿಂದೆ ನಿಯಂತ್ರಣ ಮತ್ತು ಮೇಲ್ವಿಚಾರಣೆ, ಮಾನವ ಸಂಪನ್ಮೂಲ ನಿರ್ವಹಣೆ, ಕರೆನ್ಸಿ ನಿರ್ವಹಣೆ, ಬ್ಯಾಂಕ್ ಖಾತೆಗಳು ಮತ್ತು ರಿಸರ್ವ್ ಬ್ಯಾಂಕ್‌ನಲ್ಲಿನ ಇತರ ಕ್ಷೇತ್ರಗಳಲ್ಲಿ ಆರ್‌ಬಿಐ ಕೇಂದ್ರ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಭೋಪಾಲ್‌ನ ಬರ್ಕತುಲ್ಲಾ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ ಅವರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಮತ್ತು ಫೈನಾನ್ಸ್‌ನ ಪ್ರಮಾಣೀಕೃತ ಸಹವರ್ತಿ ವೃತ್ತಿಪರ ಅರ್ಹತೆಯನ್ನು ಗಳಿಸಿದ್ದಾರೆ.

ಪ್ರಸ್ತುತ ಅವರನ್ನು ಆರ್‌ಬಿಐ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಲಾಗಿದ್ದು ಅವರು ಗ್ರಾಹಕ ಶಿಕ್ಷಣ ಮತ್ತು ರಕ್ಷಣಾ ಇಲಾಖೆಯನ್ನು ನೋಡಿಕೊಳ್ಳಲಿದ್ದಾರೆ ಎಂದು ಸೆಂಟ್ರಲ್‌ ಬ್ಯಾಂಕ್‌ ಪ್ರಕಟಣೆ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!