ರೆಪೋ ದರ ಹೆಚ್ಚಿಸಿದ ಆರ್‌ಬಿಐ: ಗ್ರಾಹಕರ ಸಾಲದ ಮೇಲಿನ ಬಡ್ಡಿ ಇನ್ನಷ್ಟು ತುಟ್ಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತೊಮ್ಮೆ ತನ್ನ ರೆಪೋ ದರವನ್ನು ಹೆಚ್ಚಳ ಮಾಡಿದೆ. ಇದರಿಂದಾಗಿ ಗ್ರಾಹಕರ ಸಾಲದ ಮೇಲಿನ ಬಡ್ಡಿಯೂ ಹೆಚ್ಚಾಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಗೃಹ ಸಾಲ, ವೈಯಕ್ತಿಕ ಸಾಲ, ಕಾರ್‌ ಲೋನ್‌, ಹೀಗೆ ಎಲ್ಲದರ ಮೇಲೆ ಪರಿಣಾಮ ಬೀರಲಿದೆ.

ಇಂದು (ಬುಧವಾರ) ಆರ್‌ಬಿಐ ಗೌವರ್ನರ್‌ ಶಕ್ತಿಕಾಂತ್ ದಾಸ್ 50 ಬೇಸಿಸ್ ಪಾಯಿಂಟ್‌ಗಳನ್ನು ಏರಿಕೆ ಮಾಡುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ರೆಪೊ ದರ ಶೇ.4.40ರಿಂದ ಶೇ.4.9೦ಕ್ಕೆ ಏರಿಕೆಯಾಗಿದೆ. ಹೆಚ್ಚಿಸಿದ ಬಡ್ಡಿ ದರಗಳು ತಕ್ಷಣವೇ ಜಾರಿಗೆ ಬರಲಿದ್ದು, ಆರ್‌ಬಿಐ ಗವರ್ನರ್ ನೇತೃತ್ವದ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಆರು ಸದಸ್ಯರು ದರ ಏರಿಕೆಗೆ ಸರ್ವಾನುಮತದಿಂದ ಮತ ಹಾಕಿದ್ದಾರೆ.

ಒಂದು ತಿಂಗಳ ಅವಧಿಯಲ್ಲಿ ಆರ್‌ಬಿಐ ತನ್ನ ರೆಪೋ ದರವನ್ನ ಎರಡು ಬಾರಿ ಹೆಚ್ಚಳ ಮಾಡಿದೆ. ಮತ್ತೊಂದೆಡೆ, ಆರ್‌ಬಿಐನ ಈ ನಿರ್ಧಾರದಿಂದಾಗಿ ಬ್ಯಾಂಕ್‌ಗಳು ಮತ್ತು ಇತರ ಹಣಕಾಸು ಸಂಸ್ಥೆಗಳು ಸಹ ಬಡ್ಡಿದರಗಳನ್ನು ಹೆಚ್ಚಿಸಲಿವೆ. ಇಎಂಐ ವಿಶೇಷವಾಗಿ ಗೃಹ ಬಳಕೆದಾರರಿಗೆ ಹೊರೆಯಾಗಲಿದೆ. ಈಗಾಗಲೇ ಯಾವುದಾದರೂ ಬ್ಯಾಂಕ್ ನಲ್ಲಿ ಸಾಲ ಹೊಂದಿದ್ದರೆ ಅಥವಾ ಸಾಲವನ್ನು ತೆಗೆದುಕೊಳ್ಳುವ ಯೋಚನೆ ಇದ್ದರೆ ಮುಂದಿನ ದಿನಗಳಲ್ಲಿ ಆ ಸಾಲದ ಬಡ್ಡಿದರ ಹೆಚ್ಚಳವಾಗುತ್ತದೆ. ಪರಿಣಾಮವಾಗಿ ಸಾಲದ ಇಎಂಐ ಮೊದಲಿಗಿಂತ ಹೆಚ್ಚಾಗಿರುತ್ತದೆ. ಇದು ಹೊಸ ಮತ್ತು ಹಳೆಯ ಎರಡೂ ಗ್ರಾಹಕರ ಮೇಲೆ ಪರಿಣಾಮ ಬೀರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!