ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ 2024 ಪ್ರಾರಂಭವಾಗಿ ಒಂದು ವಾರವಾಗಿದೆ ಮತ್ತು ಇದುವರೆಗೆ ಒಟ್ಟು 10 ಪಂದ್ಯಗಳನ್ನು ಆಡಲಾಗಿದೆ. ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಏಳು ವಿಕೆಟ್ ಗಳ ಜಯ ಸಾಧಿಸಿತು.
ಕೊಹ್ಲಿಯನ್ನು ಹೊರತುಪಡಿಸಿ, ಮತ್ಯಾರು ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಉತ್ಸಾಹ ತೋರಿಸಲಿಲ್ಲ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋಲು, ಒಂದು ಗೆಲುವು ಮತ್ತು ಎರಡು ಪಾಯಿಂಟ್‌ಗಳನ್ನು ಪಡೆದಿರುವ ಆರ್‌ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ ಮಾತ್ರ ತನ್ನ ಸ್ಥಾನವನ್ನು ಕಳೆದುಕೊಂಡಿಲ್ಲ. ಹೌದು ಹಾಗಾದರೆ ಪಾಯಿಂಟ್ಸ್ ಟೇಬಲ್ನಲ್ಲಿ ಆರ್‌ಸಿಬಿ ಯಾವ ಪಟ್ಟಿಯಲ್ಲಿದೆ, ಎಷ್ಟನೇ ಸ್ಥಾನದಲ್ಲಿದೆ ಎಂಬ ವಿವರ ಇಲ್ಲಿದೆ.
ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಸ್ಥಾನದಲ್ಲಿ ಮುಂದುವರಿದಿದೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋಲು ಮತ್ತು ಒಂದು ಗೆಲುವಿನೊಂದಿಗೆ ಎರಡು ಅಂಕಗಳನ್ನು ಪಡೆದಿದೆ. ಇವರ ನೆಟ್ ರನ್ರೇಟ್ -0.711 ಆಗಿದೆ.