ಚಾಂಪಿಯನ್ಸ್ ವಿರುದ್ಧ ಸಿಂಹದಂತೆ ಘರ್ಜಿಸಿದ RCB ಬ್ಯಾಟರ್ಸ್: ಮುಂಬೈಗೆ 197 ರನ್​ಗಳ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಮತ್ತು ಆರ್‌ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿದೆ.

ಈ ಮೂಲಕ ಮುಂಬೈಗೆ 197 ರನ್ ಟಾರ್ಗೆಟ್ ನೀಡಿದೆ. ಈ ಪಂದ್ಯದಲ್ಲಿ, ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಸೇರಿದಂತೆ ಮೂವರು ಬ್ಯಾಟ್ಸ್‌ಮನ್‌ಗಳು ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ, ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹಾಗಾಗಿ ಆರ್ಸಿಬಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಗಿದೆ.

ಇನ್ನು ಮುಂಬೈ ಪರ ಬೌಲಿಂಗ್​ನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಬರೋಬ್ಬರಿ 5 ವಿಕೆಟ್ ಗಳಿಸಿದರು. 4 ಓವರ್ ಬೌಲ್ ಮಾಡಿದ ಬುಮ್ರಾ ಕೇವಲ 21 ರನ್ ನೀಡಿ 5 ವಿಕೆಟ್ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!