ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿಹಿಡಿದ ಬೆನ್ನಲ್ಲೇ ಬೆಂಗಳೂರು ನಗರದಾದ್ಯಂತ ಸಂಭ್ರಮಾಚರಣೆ ಮುಗಿಲುಮುಟ್ಟಿತು.
ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ದುಷ್ಕರ್ಮಿಗಳ ಗುಂಪು ಕ್ರೌರ್ಯ ಮೆರೆದಿದೆ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದು ಪರಾರಿಯಾಗಿದೆ.
ಸಂಭ್ರಮಾಚರಣೆ ಮಾಡುತ್ತಾ ದುಷ್ಕರ್ಮಿಗಳು ಬಾರ್ಗೆ ತೆರಳುತ್ತಿದ್ದರು. ಇದೇ ವೇಳೆ, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ. ಸ್ಥಳದಲ್ಲಿದ್ದವರ ಪ್ರತಿರೋಧದ ಬಳಿಕ ದುಷ್ಕರ್ಮಿಗಳು ಘಟನಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.