January17, 2026
Saturday, January 17, 2026
spot_img

ಆರ್‌ಸಿಬಿ ಫ್ಯಾನ್ಸ್‌ ಫುಲ್‌ ಖುಷ್‌! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತೆ ಐಪಿಎಲ್‌ ಮ್ಯಾಚ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.

ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ನೀಡಲಾಗಿದೆ.

ರಾಜ್ಯ ಸರ್ಕಾರದ ಎಲ್ಲಾ ನಿಗದಿತ ಕ್ರಮಗಳನ್ನು ಜಾರಿಗೆ ತರಲು ಕೆಎಸ್‌ಸಿಎ ಸಿದ್ಧವಾಗಿದೆ ಎಂದು ಕೆಎಸ್‌ಸಿಎ ಅಧಿಕೃತ ವಕ್ತಾರ ವಿನಯ್ ಮೃತ್ಯುಂಜಯ ದೃಢಪಡಿಸಿದರು. ಕೆಎಸ್‌ಸಿಎ ಅಧ್ಯಕ್ಷ ಬಿ. ಕೆ. ವೆಂಕಟೇಶ್ ಪ್ರಸಾದ್ ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.

Must Read

error: Content is protected !!