ಆರ್‌ಸಿಬಿ ಫ್ಯಾನ್ಸ್‌ಗೆ ನಿರಾಳ: ಫೀಲ್ಡ್‌ನಲ್ಲಿ ಅಬ್ಬರಿಸಲಿದ್ದಾರೆ ಫಿಲ್ ಸಾಲ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐಪಿಎಲ್ ಫೈನಲ್‌ಗೆ ಕೆಲವೇ ಗಂಟೆಗಳು ಬಾಕಿಯಿರುವಾಗಲೇ ಆರ್‌ಸಿಬಿ ಅಭಿಮಾನಿಗಳಿಗೆ ಫಿಲ್ ಸಾಲ್ಟ್ ಗುಡ್‌ನ್ಯೂಸ್ ಕೊಟ್ಟಿದ್ದಾರೆ.

ಇಂದು ಆರ್‌ಸಿಬಿ ಮತ್ತು ಪಂಜಾಬ್‌ ಮಧ್ಯೆ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ಫಿಲ್‌ ಸಾಲ್ಟ್‌ ಆಡಲಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ ಆರ್‌ಸಿಬಿಯ ಅಭ್ಯಾಸ ವೇಳೆ ಸಾಲ್ಟ್ ಕಾಣಿಸಿಲ್ಲ ಎಂದು ವರದಿಯಾಗಿತ್ತು. ಇಂಗ್ಲೆಂಡಿನ ಫಿಲ್ ಸಾಲ್ಟ್ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಹೀಗಾಗಿ ಅವರು ತವರಿಗೆ ತೆರಳಿರಬಹುದು.

ಇಂದಿನ ಪಂದ್ಯದಲ್ಲಿ ಅವರು ಆಡುವುದಿಲ್ಲ ಎಂದೆಲ್ಲಾ ಹೇಳಲಾಗುತ್ತಿತ್ತು. ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ.  ಇದೀಗ ಇಂದಿನ ಫೈನಲ್ ಪಂದ್ಯದಲ್ಲಿ ಆಡುವ ಸಲುವಾಗಿ ಫಿಲ್ ಸಾಲ್ಟ್ ಮರಳಿ ಅಹಮದಾಬಾದ್‌ಗೆ ಬಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!