RCB ಅಭಿಮಾನಿಗಳೇ ನೆನಪಿಡಿ.. ಸಂಭ್ರಮಾಚರಣೆ ಬೇಕು, ಆದ್ರೆ ನಿಮ್ಮ ಜೀವದ ಬಗ್ಗೆ ಎಚ್ಚರವಿರಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್​​ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರಿನಲ್ಲಿ ಇಂದು ಆರ್​ಸಿಬಿ ವಿಜಯೋತ್ಸವ ನಡೆಯಲಿದ್ದು, ಈಗಾಗಲೇ ಆರ್​ಸಿಬಿ ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.

ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ನೂಕು ನುಗ್ಗಲು ಉಂಟಾಗಿದ್ದು, ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಗೇಟ್​ ನಂಬರ್ 6ರ ಬಳಿ ಗೇಟ್ ಹತ್ತಲು ಹೋದ ಯುವಕ ಬಿದ್ದು ಕಾಲು ಮುರಿದುಕೊಂಡಿದ್ದಾನೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!