Sunday, March 26, 2023

Latest Posts

ಕೊನೆಗೂ ಗೆದ್ದ RCB: ಗೆಲುವಿಗೆ ಕೊಹ್ಲಿ ಅಣ್ಣನ ಸಲಹೆಗಳು ಸಹಾಯವಾಯಿತು ಎಂದ ಸ್ಮೃತಿ ಮಂದಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL) ಸತತ ಸೋಲಿನಿಂದ ತೀವ್ರ ಟೀಕೆಗಳಿಗೆ ಗುರಿಯಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೊನೆಗೂ ಮೊದಲ ಗೆಲುವು ಸಂಭ್ರಮಿಸಿದೆ.

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಬುಧವಾರ ಯುಪಿ ವಾರಿಯರ್ಸ್ (UP Warriorz) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ, ಗೆಲುವಿನ ನಗೆ ಬೀರಿದೆ.

ಪಂದ್ಯದ ಬಳಿಕ ಮಾತನಾಡಿದ ಆರ್‌ಸಿಬಿ ಕ್ಯಾಪ್ಟನ್ ಸ್ಮೃತಿ ಮಂದಾನ (Smriti Mandhana), ಕೊಹ್ಲಿ (Virat Kohli) ಅಣ್ಣನ ಸಲಹೆಗಳು ಗೆಲುವಿಗೆ ತುಂಬಾ ಸಹಾಯವಾಯಿತು. ಪಂದ್ಯ ಆರಂಭಕ್ಕೂ ಮುನ್ನ ನಮ್ಮ ತಂಡದೊಂದಿಗೆ ಮಾತನಾಡಿದ್ದರು. ತಮ್ಮ 15 ವರ್ಷದ ಅನುಭವ ಹಂಚಿಕೊಳ್ಳುತ್ತಾ ನಮ್ಮಲ್ಲಿ ಉತ್ಸಾಹ ತುಂಬಿದರು. ಇದು ಆರ್‌ಸಿಬಿ ತಂಡದ ಪ್ರತಿಯೊಬ್ಬರ ಆಲ್‌ರೌಂಡ್ ಪ್ರದರ್ಶನವೂ ಗೆಲುವಿಗೆ ಕಾರಣವಾಯಿತು ಎಂದು ಹೇಳಿಕೊಂಡಿದ್ದಾರೆ.

ಮಹಿಳಾ ಪ್ರೀಮಿಯರ್ ಲೀಗ್ ಚೊಚ್ಚಲ ಆವೃತ್ತಿಯಲ್ಲಿ ಆರ್‌ಸಿಬಿ ಮೊದಲ ಗೆಲುವಿನ ಬಳಿಕ ಅಭಿಮಾನಿಗಳು ಸಂತಸಗೊಂಡಿದ್ದಾರೆ. ನಾಯಕಿ ಸ್ಮೃತಿ ಮಂದಾನ ಮುಖದಲ್ಲೂ ಮಂದಹಾಸ ಮೂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!