July 25, 2026
Saturday, July 25, 2026
spot_img

ಡಿಸೈಡಿಂಗ್ ಗೇಮ್‌ಗೆ ಆರ್‌ಸಿಬಿ ಸಜ್ಜು: ಪಂಜಾಬ್ ಕಿಂಗ್ಸ್ ಮಣಿಸಿ ಪ್ಲೇಆಫ್‌ಗೇರುತ್ತಾ ಬೆಂಗಳೂರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 61ನೇ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಹಿಮಾಚಲ ಪ್ರದೇಶದ ಧರ್ಮಶಾಲಾದ ಹೆಚ್‌ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಆರ್‌ಸಿಬಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಗಾಯದ ಸಮಸ್ಯೆಯಿಂದಾಗಿ ಇಂದಿನ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

ಏಪ್ರಿಲ್ 18 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫಿಲ್ ಸಾಲ್ಟ್ ಗಾಯಗೊಂಡಿದ್ದರು. ಸದ್ಯ ಯುಕೆನಲ್ಲಿ ಚೇತರಿಸಿಕೊಳ್ಳುತ್ತಿರುವ ಅವರು ಇನ್ನು ಸಂಪೂರ್ಣವಾಗಿ ಫಿಟ್ ಆಗದ ಕಾರಣ, ಪಂಜಾಬ್ ಕಿಂಗ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ. ಸಾಲ್ಟ್ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್‌ನ ಯುವ ಎಡಗೈ ಬ್ಯಾಟರ್ ಜೇಕಬ್ ಬೆಥೆಲ್, ರನ್ ಮಷಿನ್ ವಿರಾಟ್ ಕೊಹ್ಲಿ ಅವರೊಂದಿಗೆ ಆರ್‌ಸಿಬಿ ಪರ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಹಾಲಿ ಚಾಂಪಿಯನ್ಸ್ ಆರ್‌ಸಿಬಿ ತಂಡಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈಗಾಗಲೇ ಅಂಕಪಟ್ಟಿಯಲ್ಲಿ ಭದ್ರ ಸ್ಥಾನದಲ್ಲಿರುವ ಬೆಂಗಳೂರು ತಂಡ, ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯಗಳಿಸಿದರೆ ಅಧಿಕೃತವಾಗಿ ಪ್ಲೇಆಫ್ ಹಂತವನ್ನು ಖಚಿತಪಡಿಸಿಕೊಳ್ಳಲಿದೆ. ಮತ್ತೊಂದೆಡೆ, ಟೂರ್ನಿಯ ಪ್ಲೇಆಫ್ ರೇಸ್‌ನಲ್ಲಿ ಜೀವಂತವಾಗಿರಬೇಕಾದರೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಧರ್ಮಶಾಲಾದ ವೇಗದ ಪಿಚ್‌ನಲ್ಲಿ ಉಭಯ ತಂಡಗಳ ನಡುವೆ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !