WPL 2025 | ಬಲಿಷ್ಠ ಮುಂಬೈ ವಿರುದ್ಧ ಇಂದು ಆರ್‌ಸಿಬಿ ಮ್ಯಾಚ್‌, ಪಂದ್ಯ ಎಷ್ಟೊತ್ತಿಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಇಂದು ತನ್ನ ತವರು ಮೈದಾನದಲ್ಲಿ ಅಂದರೆ ಬೆಂಗಳೂರಿನಲ್ಲಿ ಮೊದಲ ಪಂದ್ಯವನ್ನು ಆಡಲಿದೆ. ಈಗಾಗಲೇ ಆಡಿರುವ ಎರಡು ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನು ಸೋಲಿಸಿರುವ ಸ್ಮೃತಿ ಪಡೆಗೆ ಇಂದು ಮತ್ತೊಂದು ಅಗ್ನಿಪರೀಕ್ಷೆ ಎದುರಾಗಲಿದೆ.

ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಪಡೆ, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಸೀಸನ್​ನಲ್ಲಿ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದ್ದು, ಆಡಿದ ಎರಡೂ ಪಂದ್ಯಗಳನ್ನು ಗೆದ್ದಿದೆ. ಆರ್‌ಸಿಬಿ ಈಗ ಮುಂಬೈ ಇಂಡಿಯನ್ಸ್ ವಿರುದ್ಧ ಹ್ಯಾಟ್ರಿಕ್ ಗೆಲುವಿನತ್ತ ಗಮನ ಹರಿಸಿದೆ.

ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಂದು ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯವನ್ನು ನೀವು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here